ಸೆಲ್ಫಿ ವಿಡಿಯೋ ಮಾಡಿ ಕಣ್ಣೀರಿಟ್ಟು ಯುವತಿ ಆತ್ಮಹತ್ಯೆ

ಬೆಂಗಳೂರು: ಕನ್ನಡ ಕಿರುತೆರೆ ನಟಿ ಹಾಗೂ ಮಾಡೆಲ್ ಚಂದನಾ (29) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್​ನಲ್ಲಿ ಮೇ 28ರಂದು ಈ ಘಟನೆ ನಡೆದಿದೆ. ಮನೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿದ ಪ್ರಿಯಕರ ನಂತರ ಕೈಕೊಟ್ಟಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸೆಲ್ಫಿ ವಿಡಿಯೋದಲ್ಲಿ ಚಂದನಾ ಅಳಲು ತೋಡಿಕೊಂಡಿದ್ದಾರೆ.

ಚಂದನಾ ಹಾಗೂ ಆರೋಪಿ ದಿನೇಶ್ 5 ವರ್ಷಗಳಿಂದ ಪ್ರೀತಿಸುತ್ತಿದರು. ಚಂದನಾ ಅವರಿಂದ ₹ 5 ಲಕ್ಷ ಕೂಡ ಪಡೆದಿದ್ದ ಆರೋಪಿ, ಮದುವೆಯಾಗಲು ನಿರಾಕರಿಸಿದ್ದರು ಎಂದು ತಿಳಿದುಬಂದಿದೆ. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Recommended For You

About the Author: user

Leave a Reply

Your email address will not be published. Required fields are marked *