ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗೋದು – ಸಿಎಂ ಬಿಎಸ್​ವೈ

ಬೆಂಗಳೂರು: ಬಿಜೆಪಿ ನಮ್ಮ ರಾಷ್ಟ್ರೀಯ ನಾಯಕರು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ಸಿಗೋದು ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಮಂಗಳವಾರ ಹೇಳಿದರು.

ವಿಧಾನಸೌಧದಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೋರ್ ಕಮಿಟಿ ಸಭೆಯಲ್ಲಿ ಬೇರೆ ಹೆಸರುಗಳನ್ನು ಚರ್ಚೆ ಮಾಡಿದ್ವಿ. ಆದರೆ, ಸಾಮಾನ್ಯ ಕಾರ್ಯಕರ್ತರ ಹೆಸರು ಕೊಡಿ ಅಂತಾ ಪ್ರಧಾನಿ ನೇತೃತ್ವದ ಸಂಸದೀಯ ಸಭೆ ಸೂಚನೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಿಕೊಟ್ಟಿದ್ದೇವು ಎಂದು ಅವರು ತಿಳಿಸಿದರು.

ಇನ್ನು ಅಶೋಕ್ ಗಸ್ತಿ, ಈರಣ್ಣ ಕಡಾಡಿಗೆ ರಾಜ್ಯಸಭೆ ಟಿಕೆಟ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರದ ನಾಯಕರು ಸಾಮಾನ್ಯ ಕಾರ್ಯಕರ್ತರಿಗೆ ಸೀಟು ಕೊಟ್ಟಿದ್ದಾರೆ. ಆ ಮೂಲಕ ಕಾರ್ಯಕರ್ತರಿಗೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಪ್ರಧಾನಿ ಮೋದಿ, ನಡ್ಡಾ, ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸದ್ಯ ಅವರಿಬ್ಬರು ನಾಮಪತ್ರ ಸಲ್ಲಿಸಲಿದ್ದಾರೆ ಅದಕ್ಕೆ ನಾನೂ ಕೂಡ ವಿಧಾನಸೌಧಕ್ಕೆ ಬಂದಿದ್ದೇನೆ. ಅವರು ರಾಜ್ಯಸಭೆಯಲ್ಲಿ ಒಳ್ಳೆಯ ಕೆಲಸ ಮಾಡ್ತಾರೆ ಅನ್ನೋ ವಿಶ್ವಾಸವಿದೆ. ಬಿಜೆಪಿಯಲ್ಲಿ ಮಾತ್ರ ಈ ತರ ತೀರ್ಮಾನ ಮಾಡೋಕೆ ಸಾಧ್ಯ. ಕೋರ್ ಕಮಿಟಿಯಲ್ಲಿ ನಾವು ಕೆಲವು ಹೆಸರುಗಳನ್ನು ಸೂಚಿಸಿದ್ವಿ. ಆದರೆ, ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷರು ನನ್ನ ಬಳಿ ಚರ್ಚೆ ನಡೆಸಿದರು. ಬೇರೆ ರಾಜ್ಯಗಳಲ್ಲೂ ಇದೇ ರೀತಿ ತೀರ್ಮಾನಗಳು ಆಗಿದೆ. ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭೆ ಸೀಟು ನೀಡಲು ನಿರ್ಧಾರ ಮಾಡಿದ್ದೀವಿ ಅಂತ ಚರ್ಚೆ ಮಾಡಿದರು ಎಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಾದ ಬಗ್ಗೆ ಬಿಎಸ್​ವೈ ತಿಳಿಸಿದರು.

 

Recommended For You

About the Author: user

Leave a Reply

Your email address will not be published. Required fields are marked *