‘ಮುಂದಿನ ವರ್ಷ 108 ಅಡಿ ಪ್ರತಿಮೆ ಉದ್ಘಾಟನೆಗೆ ಎಲ್ಲರೂ ಸೇರೋಣ’ – ಸಿಎಂ ಬಿ.ಎಸ್​ ಯಡಿಯೂರಪ್ಪ

ದೇವನಹಳ್ಳಿ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಶನಿವಾರ ಹೇಳಿದರು.

ಇಂದು ನಾಡಪ್ರಭು ಕೆಂಪೇಗೌಡ ಅವರ 511ನೇ ಜಯಂತೋತ್ಸವ ಹಿನ್ನೆಲೆ ಬೆಂಗಳೂರು ವಿಮಾನ ನಿಲ್ದಾಣದ ಬಳಿ  ಕೆಂಪೇಗೌಡ ಅವರ ಪ್ರತಿಮೆಗೆ ಗುದ್ದಲಿ ಪೂಜೆ ನೆರವೇರಿಸಿ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ ಜಯಂತಿಯ ಶುಭಾಶಯಗಳನ್ನು ಕೋರುತ್ತೇನೆ. ನಾವೆಲ್ಲಾ ಒಟ್ಟಾಗಿ ಸೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ ಎಂದರು.

ಇನ್ನು ಬೆಂಗಳೂರನ್ನು ಯೋಜನಾ ಬದ್ಧವಾಗಿ ಬೆಳೆಸಲು ನಾಡಪ್ರಭು ಕೆಂಪೇಗೌಡ ಅವರ ಕೊಡುಗೆ ಅಪಾರವಾಗಿದೆ. ನದಿ ಮೂಲ ಇಲ್ಲದ ಬೆಂಗಳೂರಿನಲ್ಲಿ ನೂರಾರು ಕೆರೆಗಳ ನಿರ್ಮಾಣ ಮಾಡಿದರು. ನಗರವನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದು ಕೆಂಪೇಗೌಡರು. ಚಿಕ್ಕ ಪೇಟೆ, ಅಕ್ಕಿ ಪೇಟೆ ಸೇರಿದಂತೆ ಅಂದು ಕೆಂಪೇಗೌಡರು ನಿರ್ಮಾಣ ಮಾಡಿದ ಹಿನ್ನಲೆ ಇಂದು ಇವೆಲ್ಲವೂ ವಾಣಿಜ್ಯ ಕೇಂದ್ರಗಳಾಗಿವೆ ಎಂದು ಸಿಎಂ ಬಿಎಸ್​ವೈ ಅವರು ಕೆಂಪೇಗೌಡ ಅವರು ಕೊಡುಗೆಯನ್ನು ಸ್ಮರಿಸಿದರು.

ಅಲ್ಲದೆ, ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅನುಷ್ಟಾನಕ್ಕೆ ನಮ್ಮ ಸರ್ಕಾರ ಶ್ರಮಿಸುತ್ತಿದೆ. ಮುಂದಿನ ಒಂದು ವರ್ಷದಲ್ಲಿ 108 ಪ್ರತಿಮೆಯನ್ನು ನಿರ್ಮಿಸಿ ಅದರ ಉದ್ಘಾಟನೆಗೆ ಎಲ್ಲರೂ ಸೇರೋಣ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ನುಡಿದರು.

​​​

Recommended For You

About the Author: user

Leave a Reply

Your email address will not be published. Required fields are marked *