Top

'ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ​ ಇದು ಅನ್ಯಾಯ ಅಲ್ಲವೇ' - ಸಿದ್ದರಾಮಯ್ಯ

ಸಿಎಂ ಬಿ.ಎಸ್ ಯಡಿಯೂರಪ್ಪ ಅವರೇ​ ಇದು ಅನ್ಯಾಯ ಅಲ್ಲವೇ - ಸಿದ್ದರಾಮಯ್ಯ
X

ಬೆಂಗಳೂರು: ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್​ ಮೂಲಕ ಹೇಳಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿಂದು ಬರೆದುಕೊಂಡಿರುವ ಅವರು, ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಲಹೆ ನೀಡಿದ್ದಾರೆ.

ಇನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. ಸಿಎಂ ಬಿ.ಎಸ್​ ಯಡಿಯೂರಪ್ಪ ಅವರೇ ಈ ಕಡೆ ‌ಗಮನ ಹರಿಸಿ ಎಂದು ಅವರು ತಿಳಿಸಿದ್ದಾರೆ.

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. ಸಿಎಂ ಬಿಎಸ್​ವೈ ಅವರೇ ಇದು ಅನ್ಯಾಯ ಅಲ್ಲವೇ(?) ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ, ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

Next Story

RELATED STORIES