‘600 ಆ್ಯಂಬುಲೆನ್ಸ್​​ ವ್ಯವಸ್ಥೆಗೆ ಸರ್ಕಾರ ನಿರ್ಧಾರ’ – ಸಿಎಂ ಬಿ.ಎಸ್ ಯಡಿಯೂರಪ್ಪ​

ಬೆಂಗಳೂರು: ಇಂದು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿರುವ ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಗುರುವಾರ ಹೇಳಿದರು.

ಸಂಪುಟ ಸಭೆಗೂ ಮುನ್ನ ವಿಧಾನಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಸೆಂಟ್ರಲ್​ ಟೀಂ ಕೆಲ ಸಲಹೆಗಳನ್ನು ನೀಡಿದೆ. ಹೆಚ್ಚುವರಿ ಆಗಿ ಆ್ಯಂಬುಲೆನ್ಸ್​ಗಳನ್ನು ಖರೀದಿ ಮಾಡಲು ನಿರ್ಧರಿಸಲಾಗಿದೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಸದ್ಯ ನಾಲ್ಕು ಗಂಟೆಗೆ 10 ಸಾವಿರ ಬೆಡ್ ಕೋವಿಡ್ ಕೇರ್ ಸೆಂಟರ್​ಗೆ ಭೇಟಿ ನೀಡುತ್ತೇನೆ. 280 ಆ್ಯಂಬುಲೆನ್ಸ್​ ತೆಗೆದುಕೊಳ್ಳಬೇಕು ಅಂತ ಹೇಳಿದ್ದೀನಿ. ಒಟ್ಟು 600 ಆ್ಯಂಬುಲೆನ್ಸ್​ ವ್ಯವಸ್ಥೆ ಮಾಡುತ್ತೇನೆ. ಇವತ್ತು ಅಧಿಕಾರಿಗಳಿಗೆ ಸೂಚನೆ ಕೊಡುತ್ತಿದ್ದೇನೆ ಎಂದು ಅವರು ಹೇಳಿದರು.

ಇನ್ನು ಕೆಲವು ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಸೋಂಕು ಹರಡದಂತೆ ಕ್ರಮವಹಿಸಲು ಹೇಳಿದ್ದೇನೆ. ಕೆಲವು ಜಿಲ್ಲೆಗಳಲ್ಲಿ ಕಂಟ್ರೋಲ್ ತಪ್ಪುತ್ತಿದೆ ಅಂತಹ ಕಡೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್​ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ನಾಳೆ ಪತ್ರಿಕಾಗೋಷ್ಠಿ ಕರೆದಿದ್ದೇವೆ, ವಿವರವಾಗಿ ಮಾತನಾಡುತ್ತೇನೆ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಅವರು ನುಡಿದರು.

Recommended For You

About the Author: user

Leave a Reply

Your email address will not be published. Required fields are marked *