‘ಕೊರೊನಾ ವಿಚಾರದಲ್ಲಿ ಅವ್ಯವಹಾರ ಮಾಡುವವರು ಮನುಷ್ಯತ್ವ ಇಲ್ಲದವರು’

ಮೈಸೂರು: ಬೆಂಗಳೂರಿನ ಪಾದರಾಯನಪುರ ಆಗುತ್ತಾ ಮೈಸೂರಿನ ನರಸಿಂಹರಾಜ ಕ್ಷೇತ್ರ(?) ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್​.ಟಿ ಸೋಮಶೇಖರ್ ಅವರು ಶನಿವಾರ ಆತಂಕ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನರಸಿಂಹರಾಜ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಕೇಸ್​ಗಳು ಹೆಚ್ಚಾಗುತ್ತಿದೆ. ಈ ಕ್ಷೇತ್ರದ ಜನರು ಪರೀಕ್ಷೆಗೆ ಸಹಕಾರ ನೀಡುತ್ತಿಲ್ಲ, ಸದ್ಯ ಈ ಪ್ರದೇಶವನ್ನು ಲಾಕ್​ಡೌನ್ ಮಾಡುವ ಸಾಧ್ಯತೆಯಿದ್ದು, ಕ್ಷೇತ್ರದಲ್ಲಿ ಸಮುದಾಯ ಹರಡಿದೆ. ಸಂಪೂರ್ಣ ಕ್ಷೇತ್ರವನ್ನು ಮಿನಿ ಲಾಕ್​ಡೌನ್​ ಮಾಡುವ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.

ಸದ್ಯ ಈ ಭಾಗದಲ್ಲಿ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿನ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ, ನಮ್ಮ ಅಧಿಕಾರಿಗಳಿಗೆ ಸಹಕಾರ ನೀಡುತ್ತಿಲ್ಲ, ಅಲ್ಲಿನ ಶಾಸಕರು ಇತರ ಮುಖಂಡರೊಂದಿಗೆ ಮಾತನಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಕೊರಾನಾ ನಿಯಂತ್ರಣಕ್ಕೆ ಲಾಕ್​ಡೌನ್​ ಅವಶ್ಯಕತೆ ಇದೆ ಎಂದರು.

ಇದೇ ವೇಳೆ ಕೊರೊನಾ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಪದ ಬಗ್ಗೆ ಮಾತನಾಡಿದ ಅವರು, ರೆಸಾರ್ಟ್​ನಲ್ಲಿ ಕುಳಿತು ಆರೋಪಗಳನ್ನು ಮಾಡಬೇಡಿ. ವಿಧಾನಸೌಧಕ್ಕೆ ಬನ್ನಿ ನಿಮಗೆ ಬೇಕಾದ ದಾಖಲೆ ಕೊಡುತ್ತೇವೆ. ಕೊರೊನಾ ವಿಚಾರದಲ್ಲಿ ಅವ್ಯವಹಾರ ಮಾಡುವವರು ಮನುಷ್ಯತ್ವ ಇಲ್ಲದವರು ಎಂದಿದ್ದಾರೆ.

ಸದ್ಯ ನಾವು ವೆಚ್ಚ ಮಾಡಿರುವುದೇ 550ಕೋಟಿ. ಈಗಿರುವಾಗ 2 ಸಾವಿರ ಕೋಟಿ ಅವ್ಯವಹಾರ ಎನ್ನುತ್ತಿದ್ದಾರೆ. ಇದು ಹೇಗೆ ಸಾಧ್ಯ(?) ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅಂತಾ ವಿರೋಧ ಮಾಡುತ್ತಿದ್ದಾರೆ. ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಮೈಸೂರಿನಲ್ಲಿ ಸಚಿವ ಎಸ್​.ಟಿ ಸೋಮಶೇಖರ್ ಅವರು ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *