ರಫೇಲ್​ ಯುದ್ದವಿಮಾನ ಆಗಮನದ ಹಿನ್ನೆಲೆ ಅಂಬಾಲ ವಾಯುನೆಲೆ ಸುತ್ತ 144 ಸೆಕ್ಷನ್​ ಜಾರಿ

ಹರಿಯಾಣ: ಫ್ರಾನ್ಸ್‌ನಿಂದ ಹೊರಟಿರುವ ಮೊದಲ ಹಂತದ ಐದು ರಫೇಲ್‌ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದು ಇಳಿಯಲಿದೆ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥರಾದ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಬರಮಾಡಿಕೊಳ್ಳಲಿದ್ದಾರೆ.

ಸದ್ಯ ವಾಯುನೆಲೆ ಸುತ್ತಮುತ್ತ ಮುಜಾಗ್ರತವಾಗಿ ಬಿಗಿ ಪೊಲೀಸ್‌ ಭದ್ರತೆ ಮಾಡಲಾಗಿದ್ದು, ವಾಯುನೆಲೆಯ ಪಕ್ಕದ ಹಳ್ಳಿಗಳಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ. ಯುದ್ಧ ವಿಮಾನಗಲು ಬಂದು ಇಳಿಯುವ ಸಂದರ್ಭದಲ್ಲಿ ದೃಶ್ಯ ಸೆರೆ ಹಿಡಿಯುವುದನ್ನು ಸಹ ನಿಷೇಧಿಸಲಾಗಿದೆ.

ಯುದ್ಧವಿಮಾನ ಖರೀದಿಗೆ ಫ್ರಾನ್ಸ್–ಭಾರತದ ನಡುವೆ ಒಪ್ಪಂದವಾದ ನಾಲ್ಕು ವರ್ಷಗಳ ನಂತರ ಮೊದಲ ಹಂತದಲ್ಲಿ ಐದು ರಫೇಲ್​ ಯುದ್ದ ವಿಮಾನಗಳು ಭಾರತಕ್ಕೆ ಬರುತ್ತಿವೆ. ಇನ್ನು ಐದು ವಿಮಾನಗಳನ್ನು ಫ್ರಾನ್ಸ್‌ನಲ್ಲಿ ತರಬೇತಿಗೆ ಬಳಸಿಕೊಳ್ಳಲಾಗುತ್ತಿದೆ.

ಲಡಾಖ್‌ನಲ್ಲಿ ಭಾರತ–ಚೀನಾ ನಡುವೆ ಗಡಿ ಸಮಸ್ಯೆ ಉಂಟಾಗಿರುವ ಸಮಯದಲ್ಲೇ, ಬಲಿಷ್ಠ ವಿಮಾನಗಳು ವಾಯುಪಡೆಗೆ ಸೇರ್ಪಡೆಯಾಗುತ್ತಿರುವುದು ದೇಶದ ಸಾಮರ್ಥ್ಯಕ್ಕೆ ಬಲ ತುಂಬಿದೆ. ಆಗಸ್ಟ್ ಮಧ್ಯಭಾಗದಲ್ಲಿ ವಿಮಾನಗಳ ಔಪಚಾರಿಕ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ವಾಯುಪಡೆ ವಕ್ತಾರರು ತಿಳಿಸಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *