‘ಅನಧಿಕೃತ ಸರ್ಕಾರ ದುರ್ಬಲ ಸಂಘಿ ಸರ್ಕಾರ ಬಲ’ – ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಅಧಿಕೃತ ಸರ್ಕಾರ‌ ದುರ್ಬಲಗೊಳ್ಳುತ್ತಿದೆ,‌ ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವಿಟ್​​ ಮಾಡಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್​ ಖಾತೆ ಬರೆದುಕೊಂಡಿರುವ ಅವರು, 10ನೇ ತರಗತಿ‌‌ ಪಠ್ಯದಿಂದ ಕೆಲವು ಮಹಾಪುರುಷರಿಗೆ ಸಂಬಂಧಿಸಿದ ಪಾಠವನ್ನು ಕೈಬಿಟ್ಟದ್ದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸಚಿವ ಎಸ್​ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಕರ್ನಾಟಕ ಪಠ್ಯಪುಸ್ತಕ ಸಮಿತಿ ಸರ್ಕಾರಕ್ಕಿಂತಲೂ ಉನ್ನತ ಸಂಸ್ಥೆಯೇ(?) ಅದನ್ನು ತಕ್ಷಣ ವಾಪಸು ಪಡೆಯಿರಿ, ಇಲ್ಲದೆ ಇದ್ದರೆ ನಿಮ್ಮ ಪಾತ್ರ ಒಪ್ಪಿಕೊಳ್ಳಿ ಎಂದು ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

ಕೊರೊನಾ ನಿಯಂತ್ರಿಸಲಾಗದ ರಾಜ್ಯಸರ್ಕಾರ, ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಿ, ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ. ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ, ಹೋರಾಟ ಅನಿವಾರ್ಯವಾಗಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *