‘ನಾನು ಯಡಿಯೂರಪ್ಪರ ಹಳೆ ಕೇಸ್ ಬಗ್ಗೆ ಮಾತಾಡ್ಲಾ’ – ಸಿದ್ದರಾಮಯ್ಯ ತಿರುಗೇಟು

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಹೂಬ್ಲೋಟ್ ವಾಚ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಅದು ಮುಗಿದು ಹೋದ ಕಥೆ ಮತ್ಯಾಕೆ(?) ನಾನು ಯಡಿಯೂರಪ್ಪರ ಹಳೆ ಕೇಸ್ ಬಗ್ಗೆ ಮಾತಾಡ್ಲಾ(?) ಎಂದು ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಶನಿವಾರ ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಾಚ್ ವಿಚಾರ ಮುಗಿದು ಹೋಗಿದೆ. ನಾನು ಸರ್ಕಾರಕ್ಕೆ ಆ ವಾಚ್ ವಾಪಸ್ಸು ಕೊಟ್ಟಿದ್ದೇನೆ. ಎಸಿಬಿ ತನಿಖೆ ಆಗಿ ಕ್ಲೀನ್ ಚಿಟ್ ಸಿಕ್ಕಿದೆ ಎಂದರು.

ಇನ್ನು ನಾನೇನು ವಾಚ್ ಸರ್ಕಾರದ ದುಡ್ಡಿನಿಂದ ತೆಗೆದುಕೊಂಡಿದ್ನಾ(?) ಸರ್ಕಾರದಿಂದ ಲೂಟಿ ಮಾಡಿದ ದುಡ್ದಿನಿಂದ ವಾಚ್ ಖರೀದಿಸಿದ್ನಾ(?) ಅದನ್ನು ಯಾರೋ ಕೊಟ್ಟಿದರು ಅದಕ್ಕೆ ಅವರು ಅಫಿಡೇವಿಟ್ ಕೊಟ್ಟಿದ್ದಾರೆ. ಈಗ ಅದನ್ನು ಮತ್ಯಾಕೆ ತೆಗಿದಿದ್ದಾರೆ. ಇದು ಜನರನ್ನು ದಾರಿ ತಪ್ಪಿಸುವ ಕೆಲಸ. ನಾನು ವಾಚ್ ಪ್ರಕರಣದ ಬಗ್ಗೆ ಮಾತನಾಡೋಲ್ಲ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Recommended For You

About the Author: user

Leave a Reply

Your email address will not be published. Required fields are marked *