Top

ಆಗಸ್ಟ್​​ 5ರಂದು ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ ರಾಜ್ಯದೆಲ್ಲೆಡೆ ತೀವ್ರ ಕಟ್ಟೆಚ್ಚರ

ಆಗಸ್ಟ್​​ 5ರಂದು ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ ರಾಜ್ಯದೆಲ್ಲೆಡೆ ತೀವ್ರ ಕಟ್ಟೆಚ್ಚರ
X

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಿನ್ನೆಲೆ ರಾಜ್ಯದೆಲ್ಲೆಡೆ ಕಟ್ಟುನಿಟ್ಟಿನ ಭದ್ರತೆ ಪೊಲೀಸ್​ ಇಲಾಖೆ ಮುಂದಾಗಿದ್ದು, ಅಯೋಧ್ಯೆ ರಾಮ ಮಂದಿರ ನಿರ್ಮಾಣ ಅತಿ ಸೂಕ್ಷ್ಮ ವಿಚಾರವಾಗಿದೆ. ಎಲ್ಲಾ ವಲಯ ಐಜಿಪಿಗಳು ಮತ್ತು ಎಸ್​ಪಿಗಳಿಗೆ ಸೂಚನೆ ರವಾನಿಸಿದ ಡಿಜಿಐಜಿಪಿ ಪ್ರವೀಣ್ ಸೂದ್ ಮತ್ತು ಎಡಿಜಿಪಿ (ಕಾನೂನು ಸುವ್ಯವಸ್ಥೆ ವಿಭಾಗ) ಅಮರ್ ಕುಮಾರ್ ಪಾಂಡೆ ಅವರು ರಾಜ್ಯಾದ್ಯಂತ ತೀವ್ರ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಪರೆನ್ಸ್​ ಮೂಲಕ ರಾಜ್ಯದಲ್ಲಿ ಕೈಗೊಳ್ಳಬೇಕಾದ ಭದ್ರತೆ ಕುರಿತು ಐಜಿಪಿ ಮತ್ತು ಎಸ್​​ಪಿಗಳ ಜೊತೆ ಡಿಜಿಐಜಿಪಿ ಮತ್ತು ಎಡಿಜಿಪಿ ಅವರು ಮಹತ್ವದ ಸಭೆ ನಡೆಸಿದ್ದರು.

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ. ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನೇರವೇರಿಸಲಿದ್ದಾರೆ. ಆಗಸ್ಟ್ 5ರಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಟ್ಟೆಚ್ಚರವಿರಲಿದೆ.

ಹಿರಿಯ ಪೊಲೀಸ್ ಆಧಿಕಾರಿಗಳ ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು ಈ ಕೆಳಕಂಡತಿವೆ.

  • ಭೂಮಿ ಪೂಜೆ ವೇಳೆ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವವಿದೆ.
  • ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.
  • ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು.
  • ಭೂಮಿ ಪೂಜೆ ದಿನ ಮತೀಯ ಸಂಘಟನೆಗಳು, ಸಿಎಎ ಹಾಗೂ ಎನ್ ಆರ್ ಸಿ ಹೋರಾಟಗಾರರ ಮೇಲೆ ಕಣ್ಣಿಡಬೇಕು.
  • ಯಾವುದೇ ಮೆರವಣಿಗೆ, ವಿಜಯೋತ್ಸವ, ಪ್ರತಿಭಟನೆಗೆ ಅನುಮತಿ ಇರುವುದಿಲ್ಲ.
  • ಕಮ್ಯುನಲ್ ಸೆನ್ಸಿಟೀವ್ ಜಿಲ್ಲೆಗಳಲ್ಲಿ ತೀವ್ರ ನಿಗಾ ಇಡಬೇಕು.
  • ಕೋಮು ಸೌಹಾರ್ಧತೆಗೆ ಧಕ್ಕೆ ತರುವವರು ಕಂಡುಬಂದ್ರೆ ಪ್ರಿವೆಂಟೀವ್ ಸೆಕ್ಷನ್ ಅಡಿ ವಶಕ್ಕೆ ಪಡೆಯಬೇಕು.
  • ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ.
  • ಜನನಿಬಿಡ ಪ್ರದೇಶಗಳು, ಮಾಲ್, ದೇವಸ್ಥಾನ, ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವುದು.
  • ಹಿಂದೂಪರ ಸಂಘಟನೆ, ಹಿಂದೂಯೇತರ ಸಂಘಟನೆಗಳ ಮೇಲೆ ಇವತ್ತಿನಿಂದಲೇ ಕಣ್ಣಿಡುವುದು.
  • ಡಿಎಆರ್ ಮತ್ತು ಕೆಎಸ್ಆರ್ ಪಿ ತುಕಡಿಗಳನ್ನ ನಿಯೋಜನೆ ಮಾಡಿಕೊಳ್ಳುವುದು.
  • ಕಮೀಷನರೇಟ್ ಹಾಗು ಜಿಲ್ಲೆಗಳಲ್ಲಿ 144 ಸೆಕ್ಷನ್ ಹಾಕಿ ಭದ್ರತೆ ಕೈಗೊಳ್ಳುವ ಚಿಂತನೆ.

Next Story

RELATED STORIES