Top

ದೇಶದಲ್ಲಿ19 ಲಕ್ಷ ಗಡಿದಾಟಿದ ಕೋವಿಡ್​ 19 ಸೋಂಕಿತರ ಸಂಖ್ಯೆ

ದೇಶದಲ್ಲಿ19 ಲಕ್ಷ ಗಡಿದಾಟಿದ ಕೋವಿಡ್​ 19 ಸೋಂಕಿತರ ಸಂಖ್ಯೆ
X

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 52,509 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ಏರಿಕೆಯಾದ್ರೆ, 857 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 39,795ಕ್ಕೆ ಬಂದು ನಿಂತಿದೆ.

19,08,255 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 12,82,216ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 5,86,244 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 6,259 ಕೋವಿಡ್​-19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಿನ್ನೆ ಸಾವನ್ನಪ್ಪಿದ್ದವರು110 ಮಂದಿ. ರಾಜ್ಯದಲ್ಲಿ ಒಟ್ಟು 7,3846 ಸಕ್ರಿಯ ಪ್ರಕರಣಗಳಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು 6,777 ಮಂದಿ.

ಬೆಂಗಳೂರಿನಲ್ಲಿಯೇ 2,035 ಪ್ರಕರಣಗಳು ದೃಢಪಟ್ಟಿದ್ದರೆ, ಒಟ್ಟು 34,021 ಸಕ್ರಿಯ ಪ್ರಕರಣಗಳಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. 4,274 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Next Story

RELATED STORIES