Top

ಆಗಸ್ಟ್​ 10ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ

ಆಗಸ್ಟ್​ 10ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ
X

ಬೆಂಗಳೂರು: ಆಗಸ್ಟ್​ 10ರಂದು ಮಧ್ಯಾಹ್ನ 3 ಗಂಟೆಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.​ ಸುರೇಶ್​ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿಂದು ಮಾಹಿತಿ ನೀಡಿದ್ದಾರೆ.

2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಸೋಮವಾರ ಪ್ರಕಟವಾಗಲಿದ್ದು, ಫಲಿತಾಂಶಕ್ಕಾಗಿ 8 ವರೆ ಲಕ್ಷ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಪಿಯು ಫಲಿತಾಂಶವನ್ನು ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್​ಎಂಎಸ್​ ಮೂಲಕ ಕಳುಹಿಸಲಾಗಿತ್ತು. ಎಸ್​ಎಸ್​ಎಲ್​ಸಿ ಫಲಿತಾಂಶ ಕೂಡ ಇದೇ ರೀತಿ ಪ್ರಕಟವಾಗಲಿದೆ.

ಸದ್ಯ 8.5 ಲಕ್ಷ ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದರು. ಕರ್ನಾಟಕವು ಕೋವಿಡ್ ನಡುವೆ ಪರೀಕ್ಷಾ ನಡೆಸಿದ್ದ ದೇಶದಲ್ಲಿಯೇ ಪ್ರಥಮ ರಾಜ್ಯವಾಗಿತ್ತು. ಶಿಕ್ಷಣ ಇಲಾಖೆಯೂ ಪರೀಕ್ಷೆ ನಡೆಸುವಲ್ಲಿ ಯಶಸ್ವಿಯಾಗಿತ್ತು. ಸೋಮವಾರ ಶಿಕ್ಷಣ ಸಚಿವರು ಮಲ್ಲೇಶ್ವರಂನ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

Next Story

RELATED STORIES