Top

'ಸರ್ಕಾರ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯ'

ಸರ್ಕಾರ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯ
X

ಬೆಂಗಳೂರು: ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್​ ಮಾಡಿದ್ದಾರೆ.

ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಈ ಸಂಬಂಧ ಖಾಸಗಿ ಕಂಪನಿ ಜೊತೆ ಮಾತುಕತೆ ಹಾಗೂ ಅಬಕಾರಿ ಆಯುಕ್ತರು ಈ ಬಗ್ಗೆ ಒಲವು ಹೊಂದಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರ ಇಂತಹ ಅವಿವೇಕದ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದಿದ್ದಾರೆ.

ಕೊರೋನಾ ವೈರಸ್ ನಂತರ ಎದುರಾದ ಲಾಕ್ ಡೌನ್ ಪರಿಸ್ಥಿತಿಯಿಂದ ಜನತೆ ಆದಾಯ ಇಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮನೆಬಾಗಿಲಿಗೆ ಮದ್ಯ ಪೂರೈಸುವ ಮನೆಹಾಳು ನಿರ್ಧಾರವನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

ಬೆಕ್ಕಿಗೆ ಚೆಲ್ಲಾಟವಾದರೆ ಇಲಿಗೆ ಪ್ರಾಣ ಸಂಕಟ ಎಂಬಂತೆ ಮದ್ಯದಂಗಡಿಗಳನ್ನು ಹೊಸದಾಗಿ ತೆರೆಯುವ ಇಲ್ಲ ಆನ್ಲೈನ್ ಮೂಲಕ ಮದ್ಯ ಪೂರೈಸುವ ಚಿಂತನೆ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡಲಿದೆ. ತನ್ನ ಖಜಾನೆ ತುಂಬಿಸಿಕೊಳ್ಳಲು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಸಲ್ಲ ಎಂದು ಹೆಚ್​.ಡಿ ಕುಮಾರಸ್ವಾಮಿ ಅವರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

Next Story

RELATED STORIES