Top

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ - ಸಿಎಂ ಬಿಎಸ್​ವೈ

ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ - ಸಿಎಂ ಬಿಎಸ್​ವೈ
X

ಬೆಂಗಳೂರು: ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಟ್ವಿಟ್​ ಮಾಡಿದ್ದಾರೆ.

ತಮ್ಮ ಅಧಿಕೃತ ಟ್ವಟಿರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು, ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಅವರು ಭರವಸೆ ನೀಡಿದ್ದಾರೆ.

ಸದ್ಯ ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಬಿಎಸ್​ವೈ ಅವರು ಟ್ವಿಟ್​ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.

Next Story

RELATED STORIES