Top

ಪ್ರಧಾನಿ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಫಂಡಿಂಗ್ - ಬಸನಗೌಡ ಪಾಟೀಲ್​ ಯತ್ನಾಳ್​

ಮುಖ್ಯವಾಗಿ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ವಿಜಯೇಂದ್ರ ಕೋಟ್ಯಂತರ ರೂ. ನೀಡಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು.

ಪ್ರಧಾನಿ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಫಂಡಿಂಗ್ - ಬಸನಗೌಡ ಪಾಟೀಲ್​ ಯತ್ನಾಳ್​
X

ಬೆಂಗಳೂರು: ನನಗೆ ಶೋಕಾಸ್​ ನೋಟಿಸ್ ಬಂದಿದೆ ಇದಕ್ಕೆ 45 ಅಂಶಗಳನ್ನು ಉಲ್ಲೇಖಿಸಿ ಉತ್ತರ ನೀಡಿದ್ದೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಅವರು ಗುರುವಾರ ಹೇಳಿದರು.

ವಿಧಾನಸೌಧದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನನಗೆ ನೋಟಿಸ್ ಬಂದು ತಲುಪಿದೆ​. ಈ ನೋಟಿಸ್​ಗೆ 11 ಪುಟಗಳ ಉತ್ತರ ಕೊಟ್ಟಿದ್ದೇನೆ ಎಂದು ಹೇಳಿದರು.

ಸದ್ಯ ಎಲ್ಲೂ ವಿಷಾದ ಆಗಲಿ, ಕ್ಷಮೆ ಆಗಲಿ ಕೇಳಿಲ್ಲ, ಪಕ್ಷದ ವಿರೋಧಿ ಚಟುವಟಿಕೆ ಎಲ್ಲೂ ಮಾಡಿಲ್ಲ, ಯಡಿಯೂರಪ್ಪ ಮತ್ತು ವಿಜಯೇಂದ್ರ ಬಗ್ಗೆ ಕೆಲವು ಆರೋಪ ಮಾಡಿದ್ದೇನೆ. ಈ ಬಗ್ಗೆ ತನಿಖೆ ಆಗಬೇಕು. ಮುಖ್ಯವಾಗಿ ಬಿಹಾರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ವಿಜಯೇಂದ್ರ ಕೋಟ್ಯಂತರ ರೂ. ನೀಡಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು ಎಂದರು.

ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಿದ್ದಾರೆ. ಆರ್​ಜೆಡಿ, ಕಾಂಗ್ರೆಸ್​ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ ಎಂದು ಹೇಳಿದರು.

ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎಷ್ಟು ಹಣ ಕಳುಹಿಸಿದ್ದಾರೆ(!?) ವಿಜಯೇಂದ್ರ ಅವರ ಆಪ್ತರ ಮೂಲಕ ಹಣ ಎಷ್ಟು ಕಳುಹಿಸಿದರು ಎಂಬುದರ ಬಗ್ಗೆ ತನಿಖೆ ಆಗಬೇಕು. ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಹೇಳಿದ್ದೇನೆ. ನೋಟಿಸ್​ಗೆ ಉತ್ತರ ಕೊಡುವಾಗ ನಾನು ಪತ್ರದಲ್ಲಿ ಎಲ್ಲೂ ಕ್ಷಮೆಯಾಚಿಸಿಲ್ಲ, 11 ಪುಟಗಳ ಪತ್ರದಲ್ಲಿ 45 ಪ್ಯಾರ ಇದೆ, ಪ್ರತಿ ಪ್ಯಾರದ ವಿಚಾರಗಳನ್ನ ಹಂತ ಹಂತವಾಗಿ ಮಾಧ್ಯಮದ ಮುಂದೆ ಹೇಳುತ್ತೇನೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಅವರು ಮಾತನಾಡಿದ್ದಾರೆ.

ಯಡಿಯೂರಪ್ಪ ಕುಟುಂಬ ಬಿಜೆಪಿ ಶಾಸಕರನ್ನ ಗೌರವಿಸುತ್ತಿಲ್ಲ, ಬಿಜೆಪಿ ಆಶಯಕ್ಕೆ ತಕ್ಕಂತೆ ಅಧಿಕಾರ ನಡೆಸುತ್ತಿಲ್ಲ, ಅವರ ಕುಟುಂಬದ ಬಗ್ಗೆಯೂ ಉಲ್ಲೇಖಿಸಿದ್ದಾನೆ. ಬಿಎಸ್​ವೈ ಕುಟುಂಬದ ವಿರುದ್ಧ ತನಿಖೆಗೆ ಒತ್ತಾಯಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಹೇಳಿದರು.

Next Story

RELATED STORIES