Top

ಡ್ರಗ್ಸ್​ ಪ್ರಕರಣ: ಸಿಸಿಬಿ ವಿಚಾರಣೆಗೆ ಇಂದು ಆ್ಯಂಕರ್​ ಅನುಶ್ರೀ ಗೈರು

ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಆ ಪಾರ್ಟಿಯಲ್ಲಿ ಅನುಶ್ರೀ ಭಾಗವಹಿಸಿದ್ದರು ಎಂದು ತರುಣ್​ ರಾಜ್​ ತಿಳಿಸಿದ್ದಾರೆ.

ಡ್ರಗ್ಸ್​ ಪ್ರಕರಣ: ಸಿಸಿಬಿ ವಿಚಾರಣೆಗೆ ಇಂದು ಆ್ಯಂಕರ್​ ಅನುಶ್ರೀ ಗೈರು
X

ಮಂಗಳೂರು: ಅನುಶ್ರೀ ಹೆಗಲಿಗೆ ಅಂಟಿಕೊಂಡ ಡ್ರಗ್ಸ್ ಕೇಸ್​ನ ವಿಚಾರಣೆ ಮುಂದುವರಿದಿದೆ. ಆದರೆ, ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದ ಆ್ಯಂಕರ್ ಅನುಶ್ರೀ ನಾಪತ್ತೆಯಾಗಿದ್ದಾರೆ. ಅನುಶ್ರೀ ಹೆಸರು ಹೇಳಿದ್ದ ತರುಣ್ ಇಂದು ಮಹತ್ವದ ವಿಚಾರಗಳನ್ನು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಡ್ರಗ್ಸ್ ಪೆಡ್ಲರ್ ಗಳ ಜೊತೆ ಸಂಪರ್ಕ ಹೊಂದಿದ್ದ ಅನುಶ್ರೀಗೆ ಸಿಸಿಬಿ ನೋಟಿಸ್ ನೀಡಿದೆ. ನಿನ್ನೆ ಖುದ್ದಾಗಿ ಬೆಂಗಳೂರಿಗೆ ತೆರಳಿ ನೋಟಿಸ್ ನೀಡಿದ್ದ ಮಂಗಳೂರು ಸಿಸಿಬಿ ಪೋಲಿಸರಿಗೆ ಇಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಅನುಶ್ರೀ ಹೇಳಿದ್ದರು. ಆದರೆ, ಇಂದು ವಿಚಾರಣೆಗೆ ಹಾಜರಾಗದೇ ಆ್ಯಂಕರ್ ಅನುಶ್ರೀ ನಾಟ್ ರೀಚೇಬಲ್ ಆಗಿದ್ದಾರೆ.

ನಿನ್ನೆ ರಾತ್ರಿ ಸೋಷಿಯಲ್ ಮೀಡಿಯಾ ಫೇಸ್​ಬುಕ್​ನಲ್ಲಿ ಪತ್ರಿಕಾ ಪ್ರಕಟಣೆ ಹಾಕಿದ್ದ ಅನುಶ್ರೀ ಇಂದು ಬೆಳಗ್ಗೆ ಮಂಗಳೂರು ಸಿಸಿಬಿ ಪೋಲಿಸರ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಇಂದು ಮುಂಜಾನೆ 5ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ್ಟಿದ್ದರು. ಆದರೆ, ಅನುಶ್ರೀ ಮಾತ್ರ ಇಂದು ವಿಚಾರಣೆಗೆ ಹಾಜರಾಗಿಲ್ಲ.

ಆ್ಯಂಕರ್ ಅನುಶ್ರೀ ವಿಚಾರಣೆಗೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ನಾರ್ಕೋಟಿಕ್ ಕ್ರೈಂ ಠಾಣೆ ಪೊಲೀಸರು ಸಾಕಷ್ಟು ಪ್ರಿಪ್ಯಾರ್ ಮಾಡಿಕೊಂಡಿದ್ದರು. 15 ಜನ ಅಧಿಕಾರಿಗಳು, ಸಿಬ್ಬಂದಿಗಳಿಂದ ವಿಚಾರಣೆಗೆ ತಯಾರಿ ಮಾಡಲಾಗಿತ್ತು. ಮೊದಲ ಹಂತದಲ್ಲಿ ಆರೋಪಿಗಳಾದ ಕಿಶೋರ್ ಅಮನ್, ತರುಣ್ ರಾಜ್ ಜೊತೆಗಿನ ಸಂಬಂಧ ಬಗ್ಗೆ ಪ್ರಶ್ನಿಸಿ, ಎರಡನೇ ಹಂತದಲ್ಲಿ ಸಾಕ್ಷ್ಯ ತೋರಿಸಿ ಅನುಶ್ರೀಗೆ ಪ್ರಶ್ನೆ ಮಾಡಲಿದ್ದಾರೆ.

ಈಗಾಗಲೇ ಬಂಧನವಾಗಿರುವ ಕಿಶೋರ್ ಶೆಟ್ಟಿ, ತರುಣ್ ರಾಜ್​, ಅಕೀಲ್ ಮಂಗಳೂರಿನ ಪಾಂಡೇಶ್ವರದಲ್ಲಿನ ಇಕೊನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಆದರೆ, ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಇಬ್ಬರು ಆರೋಪಿಗಳಾದ ಕಿಶೋರ್ ಹಾಗೂ ಅಕೀಲ್ ನನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೋರ್ಟ್​ಗೆ ಹಾಜರುಪಡಿಸುವ ಮುನ್ನ ಇಂದು ಕೂಡಾ ಆರೋಪಿಗಳಿಗೆ ಡ್ರಿಲ್ ಮಾಡಲಾಗಿದ್ದು ಆರೋಪಿ ತರುಣ್ ರಾಜ್​ ಅನುಶ್ರೀ ಬಗೆಗಿನ ಮಹತ್ವದ ಸಂಗತಿಗಳನ್ನು ಬಾಯಿಬಿಟ್ಟಿದ್ದಾರೆ.

ನಿನ್ನೆ ಬಂಧನ ಮಾಡಿದ ಬಳಿಕ ತರುಣ್ ರಾಜ್​ ಅನುಶ್ರೀ ಕುಡಿತಾ ಇದ್ಲು ಅಂತಾ ಮಾತ್ರ ಹೇಳಿದ್ದ. ಆದರೆ, ಪೋಲಿಸರು ತನಿಖೆ ಚುರುಕುಗೊಳಿಸಿದ ಬಳಿಕ ಒಂದೊಂದೇ ಮಾಹಿತಿ ಹೊರಬಂದಿದೆ. ನಾವು ಡ್ರಗ್ ಪಾರ್ಟಿ ಮಾಡುತ್ತಿದ್ವಿ, ಆ ಪಾರ್ಟಿಯಲ್ಲಿ ಅನುಶ್ರೀ ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.

ತರುಣ್ ರಾಜ್​ ನೀಡಿರುವ ಈ ಎಲ್ಲಾ ಮಾಹಿತಿಗಳು ಅನುಶ್ರೀಗೆ ಕಂಟಕವಾಗುವ ಎಲ್ಲಾ ಸಾಧ್ಯತೆಗಳಿವೆ. ಸದ್ಯ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗುವುದಕ್ಕೆ ಮೂರು ದಿನಗಳ ಕಾಲಾವಕಾಶವಿದೆ. ಹೀಗಾಗಿ ಅನುಶ್ರೀ ನಾಳೆಯ ಒಳಗೆ ವಿಚಾರಣೆಗೆ ಹಾಜರಾಗುವ ಸಾಧ್ಯತೆಗಳಿವೆ.

Next Story

RELATED STORIES