Top

ಜೋಡಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್​ - ಐಜಿಪಿ ವಿಫುಲ್​ ಕುಮಾರ್ ಸ್ಪಷ್ಟನೆ

  • ಪೊಲೀಸರು ವಾರ್ನಿಂಗ್ ಕೊಡಲು ಗಾಳಿಯಲ್ಲಿ ಗುಂಡು ಹಾರಿಸಿದ್ದರು ಆದರೂ ಆರೋಪಿ ಚಾಕುವಿನಿಂದ ಇರಿದಿದ್ದಾನೆ.
  • ಆರೋಪಿ ಮತ್ತು ಸಿಪಿಐ ಆರೋಗ್ಯ ಚೇತರಿಕೆ ಕಂಡಿದೆ.
  • ಚನ್ನರಾಯಪಟ್ಟಣ ಸೇರಿ ಎಲ್ಲೆಡೆ ಗಂಭೀರ ಕ್ರಮಕೈಗೊಂಡು ನಿಗಾ.

ಜೋಡಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್​ - ಐಜಿಪಿ ವಿಫುಲ್​ ಕುಮಾರ್ ಸ್ಪಷ್ಟನೆ
X

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಆರೋಪಿ ಮೇಲೆ ಫೈರಿಂಗ್ ಪ್ರಕರಣ ಹಿನ್ನೆಲೆ ಮೈಸೂರು ದಕ್ಷಿಣವಲಯ ಐಜಿಪಿ ವಿಫುಲ್​ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಎರಡು ದಿನಗಳ ಹಿಂದೆ ಜೋಡಿ ಕೊಲೆಯಾಗಿತ್ತು. ಮಾಹಿತಿ ಆಧರಿಸಿ ಆರೋಪಿ ಪತ್ತೆಗೆ ನಮ್ಮ ಪೊಲೀಸರು ತೆರಳಿದ್ದರು ಎಂದು ಹೇಳಿದರು.

ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಸ್ಥಳಕ್ಕೆ ತೆರಳಿದ ವೇಳೆ ಆರೋಪಿ ಶರಣಾಗುವಂತೆ ಪೊಲೀಸರು ಹೇಳಿದ್ದಾರೆ. ಆರೋಪಿ ಶರಣಾಗದೇ ಪೊಲೀಸರ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪೊಲೀಸರು ವಾರ್ನಿಂಗ್ ಕೊಡಲು ಗಾಳಿಯಲ್ಲಿ ಗುಂಡು ಹಾರಿಸಿದ್ದರು ಆದರೂ ಆರೋಪಿ ಚಾಕುವಿನಿಂದ ಇರಿದಿದ್ದಾನೆ ಎಂದು ಅವರು ಪೊಲೀಸರು​ ಫೈರಿಂಗ್ ಮಾಡಿರುವ ಬಗ್ಗೆ ಸ್ಪಷ್ಟನೆ ನೀಡಿದರು.

ಇನ್ನು ಮತ್ತೊಬ್ಬ ಪೊಲೀಸ್ ಅಧಿಕಾರಿ ಆರೋಪಿಯ ಮೇಲೆ ಫೈರಿಂಗ್ ಮಾಡಿದ್ದಾರೆ. ಆರೋಪಿ ಮತ್ತು ಸಿಪಿಐ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿ ಮತ್ತು ಸಿಪಿಐ ಆರೋಗ್ಯ ಚೇತರಿಕೆ ಕಂಡಿದೆ. ಚನ್ನರಾಯಪಟ್ಟಣ ಸೇರಿ ಎಲ್ಲೆಡೆ ಗಂಭೀರ ಕ್ರಮಕೈಗೊಂಡು ನಿಗಾ ವಹಿಸಿದ್ದಾರೆ. ಒಟ್ಟು ಈಗ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದೇವೆ ಎಂದು ಐಜಿಪಿ ವಿಫುಲ್ ಕುಮಾರ್ ಅವರು ಹೇಳಿದ್ದಾರೆ.

Next Story

RELATED STORIES