Top

ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಭಾರತೀಯ ಚಿತ್ರರಂಗದ ಪ್ರಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.

ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ
X

ಚೆನ್ನೈ: ಭಾರತೀಯ ಚಿತ್ರರಂಗದ ಪ್ರಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಅವರ ಮಗ ಎಸ್​.ಪಿ ಚರಣ್​ ಅವರು ಮಾಹಿತಿ ನೀಡಿದ್ದಾರೆ.

ಆಗಸ್ಟ್ 5ರಂದು ಕೋವಿಡ್ 19 ಸೋಂಕು ತಗುಲಿ ಚೆನ್ನೈನ ಎಂಜಿಎಂ ಹೆಲ್ತ್​ಕೇರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ 1 ಗಂಟೆ 4 ನಿಮಿಷಕ್ಕೆ ವಿಧಿವಶರಾಗಿದ್ದಾರೆ.

ಎಸ್​ಪಿ ಬಾಲಸುಬ್ರಹ್ಮಣ್ಯಂ (ಜೂನ್ 4.1946) ಕೊನೇಟಮ್ಮಪೇಟಾ, ನೆಲ್ಲೂರ್ ಜಿಲ್ಲೆ, ಆಂಧ್ರಪ್ರದೇಶದಲ್ಲಿ ಜನಿಸಿದ್ದರು. ಎಸ್​ಪಿಬಿ ಅವರು ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಹಾಡುಗಾರಿಕೆಯಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಕಂಠದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವು ವಿಭಾಗದಲ್ಲಿ ಗುರುತಿಸಿಕೊಂಡಿದ್ದರು.

ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರು ಪದ್ಮಭೂಷಣ, ಪದ್ಮಶ್ರೀ, ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

Next Story

RELATED STORIES