Top

COVID 19 India Updates: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,327 ಹೊಸ ಪ್ರಕರಣಗಳು ಪತ್ತೆ

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್‌ನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.

COVID 19 India Updates: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 18,327 ಹೊಸ ಪ್ರಕರಣಗಳು ಪತ್ತೆ
X

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌-19 ಪತ್ತೆಯಾದ 18,327 ಹೊಸ ಪ್ರಕರಣಗಳು ದಾಖಲಾಗಿದ್ದು, 108 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,11,92,088ಕ್ಕೆ ಏರಿಕೆಯಾಗಿದ್ದು, ಆ ಪೈಕಿ 1,57,656 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 1,08,54,128 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,80,304 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕ, ಮಹಾರಾಷ್ಟ್ರ, ಕೇರಳ, ಪಂಜಾಬ್‌ನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ 90,055, ಕೇರಳದಲ್ಲಿ 43,856, ಪಂಜಾಬ್‌ 6,661, ಕರ್ನಾಟಕದಲ್ಲಿ 6,393, ತಮಿಳುನಾಡಿನಲ್ಲಿ 3,954 ಸಕ್ರಿಯ ಪ್ರಕರಣಗಳಿವೆ.

Next Story

RELATED STORIES