Top

COVID 19 India Updates: ದೇಶಾದ್ಯಂತ ಒಂದೇ ದಿನದಲ್ಲಿ 86,508 ಹೊಸ ಪ್ರಕರಣ ಪತ್ತೆ

ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 86,508 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ.

COVID 19 India Updates: ದೇಶಾದ್ಯಂತ ಒಂದೇ ದಿನದಲ್ಲಿ 86,508 ಹೊಸ ಪ್ರಕರಣ ಪತ್ತೆ
X

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ86,508 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,732,519ಕ್ಕೆ ಏರಿಕೆಯಾಗಿದ್ರೆ, 1,129 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 91,149ಕ್ಕೆ ಬಂದು ನಿಂತಿದೆ.

5,732,519 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 46,74,988ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 9,66,382 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಕರ್ನಾಟಕದಲ್ಲಿ ಇಲ್ಲಿಯವರೆಗೆ 5,408,47 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳು ಸಂಖ್ಯೆ 94,652. ಗುಣಮುಖರಾದವರ ಸಂಖ್ಯೆ 437910. ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 8,266 ಮಂದಿ ಸಾವನ್ನಪ್ಪಿದ್ದಾರೆ.

Next Story

RELATED STORIES