Top

COVID 19 India Updates: ದೇಶಾದ್ಯಂತ 52 ಲಕ್ಷ ಗಡಿದಾಟಿದ ಕೋವಿಡ್​ 19 ಸೋಂಕಿತರ ಸಂಖ್ಯೆ

ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 96,424 ಹೊಸ ಕೇಸ್​ಗಳು ಪತ್ತೆ.

COVID 19 India Updates: ದೇಶಾದ್ಯಂತ 52 ಲಕ್ಷ ಗಡಿದಾಟಿದ ಕೋವಿಡ್​ 19 ಸೋಂಕಿತರ ಸಂಖ್ಯೆ
X

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 96,424 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 52,14,678ಕ್ಕೆ ಏರಿಕೆಯಾಗಿದ್ರೆ, 1,174 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 84,372ಕ್ಕೆ ಬಂದು ನಿಂತಿದೆ.

49,30,237 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 41,12,552ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 10,17,754 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.


ಕರ್ನಾಟಕದಲ್ಲಿ ಇಲ್ಲಿಯವರೆಗೆ 494356 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳು ಸಂಖ್ಯೆ 103631. ಗುಣಮುಖರಾದವರ ಸಂಖ್ಯೆ 383077. ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 7629 ಮಂದಿ ಸಾವನ್ನಪ್ಪಿದ್ದಾರೆ.

Next Story

RELATED STORIES