Top

COVID 19 India Updates: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 35,871 ಹೊಸ ಕೋವಿಡ್​ 19 ಪ್ರಕರಣಗಳು ಪತ್ತೆ

ಸದ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲೆಡೆ ಲಸಿಕೆ ಅಭಿಯಾನ ಮತ್ತಷ್ಟು ಚುರುಕುಗೊಂಡಿದೆ.

COVID 19 India Updates: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 35,871 ಹೊಸ ಕೋವಿಡ್​ 19 ಪ್ರಕರಣಗಳು ಪತ್ತೆ
X

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 35,871 ಹೊಸ ಕೋವಿಡ್​ 19 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷದ ಡಿಸೆಂಬರ್​ ತಿಂಗಳಲ್ಲಿ ಕೊರೊನಾ ಪ್ರಮಾಣ ಕಡಿಮೆಯಾಗಿತ್ತು.

ಸದ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲೆಡೆ ಲಸಿಕೆ ಅಭಿಯಾನ ಮತ್ತಷ್ಟು ಚುರುಕುಗೊಂಡಿದೆ.

ಮಹಾರಾಷ್ಟ್ರದಲ್ಲಿ 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಕೋವಿಡ್‌ನಿಂದ 172 ಜನರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 1,14,74,605 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,59,216 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈವರೆಗೂ 1,10,63,025 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 2,52,364 ಸಕ್ರಿಯ ಪ್ರಕರಣಗಳಿವೆ. ಈವರೆಗೆ 3. 71 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Next Story

RELATED STORIES