Top

ದೆಹಲಿ-ಲಖನೌ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಸೇಫ್​

ಬೆಂಕಿ ಅವಘಡದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ದೆಹಲಿ-ಲಖನೌ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಸೇಫ್​
X

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶತಾಬ್ದಿ ಎಕ್ಸ್‌ಪ್ರೆಸ್‌ನ ಲಗ್ಗೇಜ್ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶತಾಬ್ದಿ ಎಕ್ಸ್‌ಪ್ರೆಸ್‌ ಶನಿವಾರ ಬೆಳಗ್ಗೆ 6.41ರ ಹೊತ್ತಿಗೆ ಗಾಜಿಯಾಬಾದ್ ನಿಲ್ದಾಣಕ್ಕೆ ತಲುಪಿತ್ತು. ಬೆಂಕಿ ಅವಘಡದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ನವದೆಹಲಿ - ಲಖನೌ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಅಕಸ್ಮಿಕ ಅವಘಡ ಸಂಭವಿಸಿದ್ದು, ಸದ್ಯ ರೈಲಿನಲಿರುವ ಪ್ರಯಾಣಿಕರು ಸೇಫ್​ ಆಗಿದ್ದಾರೆ. ಯಾರೊಬ್ಬರಿಗೂ ಸಹ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Next Story

RELATED STORIES