Top

ವಿದೇಶಿ ಸೆಲೆಬ್ರಿಟಿಗಳು ಸರ್ಕಾರದ ನೀತಿಯನ್ನಷ್ಟೇ ವಿರೋಧಿಸಿರೋದು ದೇಶವನ್ನು ವಿರೋಧಿಸಿಲ್ಲ

ಈಗ ಸೆಲೆಬ್ರಿಟಿಗಳ ಟ್ವಿಟ್​ ತಪ್ಪು ಎನ್ನುತ್ತಿದೆ ಬಿಜೆಪಿ. ಸೆಲೆಬ್ರಿಟಿಗಳು ಸರ್ಕಾರದ ನೀತಿಯನ್ನಷ್ಟೇ ವಿರೋಧಿಸಿರೋದು.

ವಿದೇಶಿ ಸೆಲೆಬ್ರಿಟಿಗಳು ಸರ್ಕಾರದ ನೀತಿಯನ್ನಷ್ಟೇ ವಿರೋಧಿಸಿರೋದು ದೇಶವನ್ನು ವಿರೋಧಿಸಿಲ್ಲ
X

ಬೆಂಗಳೂರು: ರೈತರ ಪ್ರತಿಭಟನೆಗೆ ನಮ್ಮ ಬೆಂಬಲವಿದೆ ಎಂದು ಜೆಡಿಎಸ್​ ಮುಖಂಡ ವೈ.ಎಸ್​.ವಿ ದತ್ತಾ ಅವರು ಶನಿವಾರ ಹೇಳಿದ್ದಾರೆ.

ಇಂದು ರೈತರ ಹೆದ್ದಾರಿ ತಡೆ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಜೆ.ಪಿ ಭವನದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ರೈತರಿಗೆ ಕೇಂದ್ರದ ಸಮರ್ಥನೆ ತೃಪ್ತಿ ತರುತ್ತಿಲ್ಲ, ರೈತರನ್ನು ಅಪರಾಧ ಪಟ್ಟಿಯಲ್ಲಿ ಸೇರಿಸುವ ಪ್ರಯತ್ನ ಮಾಡುತ್ತಿದೆ. ರೈತರ ಹೋರಾಟ ದುರ್ಬಲಗೊಳಿಸುವ ಯತ್ನ ನಡೆಸುತ್ತಿದೆ ಎಂದಿದ್ದಾರೆ.

ಇನ್ನು ಕೇಂದ್ರ ವಿದೇಶಿ ಸೆಲೆಬ್ರಿಟಿಗಳ ಟ್ವಿಟ್​ ತಪ್ಪು ಎನ್ನುತ್ತಿದೆ. ಆದರೆ, ಹಿಂದೆ ಇಂದಿರಾ ಗಾಂಧಿ ಅವರ ತುರ್ತು ಪರಿಸ್ಥಿತಿಗೂ ವಿರೋಧವಿತ್ತು. ಜಗತ್ತಿನ ಜನತಾಂತ್ರಿಕ ದೇಶಗಳು ವಿರೋಧಿಸಿದ್ದವು. ಆಗ ಇದ್ದ ಜನಸಂಘವೂ ಅದನ್ನು ಒಪ್ಪಿಕೊಂಡಿತ್ತು. ಆದರೆ, ಈಗ ಸೆಲೆಬ್ರಿಟಿಗಳ ಟ್ವಿಟ್​ ತಪ್ಪು ಎನ್ನುತ್ತಿದೆ ಬಿಜೆಪಿ. ಸೆಲೆಬ್ರಿಟಿಗಳು ಸರ್ಕಾರದ ನೀತಿಯನ್ನಷ್ಟೇ ವಿರೋಧಿಸಿರೋದು. ಅವರು ದೇಶವನ್ನು ವಿರೋಧಿಸಿಲ್ಲ ಎಂದು ಬಿಜೆಪಿ ವಿರುದ್ಧ ವೈ.ಎಸ್.​ವಿ ದತ್ತಾ ಅವರು ವಾಗ್ದಾಳಿ ನಡೆಸಿದ್ದಾರೆ.

Next Story

RELATED STORIES