ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶಮುಖ್ ರಾಜೀನಾಮೆ
ದೇಶಮುಖ್ ಅವರ ರಾಜೀನಾಮೆಯನ್ನು ಅಂಗೀಕರಿಸಿ ಮತ್ತು ಪಾಟೀಲ್ ಅವರನ್ನು ಹೊಸ ಗೃಹ ಸಚಿವರನ್ನಾಗಿ ನೇಮಿಸುವಂತೆ ರಾಜ್ಯಪಾಲರಿಗೆ ಪತ್ರ

X
Admin 25 April 2021 2:54 PM GMT
ಮಹಾರಾಷ್ಟ್ರ: ಇಲ್ಲಿನ ಸರ್ಕಾರದ ಗೃಹ ಸಚಿವ ಅನಿಲ್ ದೇಶಮುಖ್ ರಾಜೀನಾಮೆ ನೀಡಿದ ಬಳಿಕ ಎನ್ಸಿಪಿಯಿಂದ ಆರು ಬಾರಿ ಶಾಸಕರಾಗಿದ್ದ ದಿಲೀಪ್ ವಾಲ್ಸೆ ಪಾಟೀಲ್ ಅವರು ನೂತನ ಗೃಹ ಸಚಿವರಾಗಿ ನೇಮಕಗೊಂಡಿದ್ದಾರೆ.
ಇನ್ನು ಈ ಬೆಳೆವಣಿಗೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದು, ದೇಶಮುಖ್ ಅವರ ರಾಜೀನಾಮೆಯನ್ನು ಅಂಗೀಕರಿಸಿ ಮತ್ತು ಪಾಟೀಲ್ ಅವರನ್ನು ಹೊಸ ಗೃಹ ಸಚಿವರನ್ನಾಗಿ ನೇಮಿಸುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದೇವೆ ಎಂದಿದ್ದಾರೆ.
ಪ್ರಸ್ತುತ ದಿಲೀಪ್ ವಾಲ್ಸೆ ಪಾಟೀಲ್ ಅವರು ರಾಜ್ಯದ ಕಾರ್ಮಿಕ ಮತ್ತು ಅಬಕಾರಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಹಣಕಾಸು ಸಚಿವಾಲಯದ ಉಸ್ತುವಾರಿ ವಹಿಸಿರುವ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಅಬಕಾರಿ ಸಚಿವ ಖಾತೆ ನೀಡಲಾಗುವುದು ಎಂದು ಸರ್ಕಾರದ ಮೂಲಗಳು ಹೇಳಿದೆ.
Next Story