Top

ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ದ್ರೋಹಿಗಳಿಗೆ ಬಿಜೆಪಿ ಟಿಕೆಟ್‌ ನೀಡಿದೆ

ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ
X

ಪಶ್ಚಿಮ ಬಂಗಾಳ: ತೃಣ ಮೂಲ ಕಾಂಗ್ರೆಸ್​ (ಟಿಎಂಸಿ) ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿರುವ ಮುಖಂಡರ ವಿರುದ್ಧ ವೆಸ್ಟ್​ ಬೆಂಗಾಲ್​ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುಡುಗಿದ್ದಾರೆ.

ಇಂದು (ಶುಕ್ರವಾರ) ಪಶ್ಚಿಮ ಬಂಗಾಳ ರಾಜ್ಯ ಪುರ್ಬಾ ಮೇದಿನಿಪುರ್‌ದಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಗೊಂಡವರು ದ್ರೋಹಿಗಳಾಗಿದ್ದು, ಅವರಂತಹ ದ್ರೋಹಿಗಳಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಅವರು ಪಕ್ಷ ತೊರೆದು ಹೋಗಿದ್ದು ಒಳ್ಳೆಯದಾಗಿದೆ. ಈ ಎಲ್ಲಾ ಬೆಳವಣಿಗೆಗಳಿಂದ ಬಿಜೆಪಿ ಪಾಳದಲ್ಲಿ ಗುರುತಿಸಿಕೊಂಡಿರುವ ಹಳೆಯ ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರು ಕಣ್ಣೀರು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29 ರಂದು ಮತದಾನ ನಡೆಯಲಿದೆ. ಮೇ.02ರಂದು ಫಲಿತಾಂಶ ಪ್ರಕಟವಾಗಲಿದೆ

Next Story

RELATED STORIES