Top

ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರು ಮರುನಾಮಕರಣ

ಇನ್ನು ಮಾರ್ಚ್‌ 4ರಿಂದ ನಡೆಯುವ ನಾಲ್ಕನೇ ಪಂದ್ಯಕ್ಕೂ ಈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರು ಮರುನಾಮಕರಣ
X

ಗುಜರಾತ್​: ಅಹಮದಾಬಾದ್​ದಲ್ಲಿರುವ ವಿಶ್ವದ ಅತಿದೊಡ್ಡ ಕ್ರಿಕೆಟ್‌ ಅಂಗಳ ಎಂಬ ಹೆಗ್ಗಳಿಕೆಯ ಸರ್ದಾರ್‌ ಪಟೇಲ್ ಕ್ರೀಡಾಂಗಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ.

ಈ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಉದ್ಘಾಟಿಸಿದ್ದಾರೆ. 63 ಎಕರೆ ವಿಸ್ತೀರ್ಣದಲ್ಲಿ ಈ ಕ್ರೀಡಾಂಗಣ ನಿರ್ಮಾಣವಾಗಿದ್ದು, 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿದೆ.

ಇದು ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾಗಿತ್ತು. ಈ ಸ್ಟೇಡಿಯಂ ಅನ್ನು ಇನ್ಮುಂದೆ ಮೋದಿ ಹೆಸರಿನಿಂದಲೇ ಕರೆಯಲು ನಿರ್ಧರಿಸಲಾಗಿದೆ ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ಇದೇ ವೇಳೆ 232 ಎಕರೆ ಜಾಗದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ರಾಷ್ಟ್ರಪತಿಗಳು ಶಿಲಾನ್ಯಾಸ ಮಾಡಿದ್ದಾರೆ.

ಸದ್ಯ ಈ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಕ್ರಿಕೆಟ್‌ ಸರಣಿಯ ಮೂರನೇ ಪಂದ್ಯ ಇಲ್ಲಿ ಆರಂಭವಾಯಿತು. ಇನ್ನು ಮಾರ್ಚ್‌ 4ರಿಂದ ನಡೆಯುವ ನಾಲ್ಕನೇ ಪಂದ್ಯಕ್ಕೂ ಈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

Next Story

RELATED STORIES