Top

ಪ್ರಧಾನಿ ಮೋದಿ ಬಗ್ಗೆ ರಾಹುಲ್​ ಗಾಂಧಿ ವಾಗ್ದಾಳಿ

ನಿಜವಾಗಿಯೂ ಪ್ರಧಾನಿಯು ಭಾರತದ ಭೂಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ

ಪ್ರಧಾನಿ ಮೋದಿ ಬಗ್ಗೆ ರಾಹುಲ್​ ಗಾಂಧಿ ವಾಗ್ದಾಳಿ
X

ನವದೆಹಲಿ: ಪ್ರಧಾನಿ ಮೋದಿ ನಮ್ಮ ಸೈನ್ಯದ ತ್ಯಾಗದ ಮೇಲೆ ಉಗುಳುತ್ತಿದ್ದಾರೆ. ಚೀನಾದವರ ಮುಂದೆ ನಿಲ್ಲಲಾಗದ ಪ್ರಧಾನಮಂತ್ರಿಯೊಬ್ಬ ಹೇಡಿ ಎಂದು ಲಡಾಖ್ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ದೆಹಲಿಯ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪಿಎಂ ಮೋದಿ ನಮ್ಮ ಸೈನ್ಯದ ತ್ಯಾಗಕ್ಕೆ ದ್ರೋಹ ಮಾಡುತ್ತಿದ್ದಾರೆ. ದೇಶದಲ್ಲಿ ಈ ರೀತಿ ಮಾಡಲು ಯಾರಿಗೂ ಅವಕಾಶ ನೀಡಬಾರದು ಎಂದಿದ್ದಾರೆ.

ಪೂರ್ವ ಲಡಾಕ್‌ನಲ್ಲಿನ ಪರಿಸ್ಥಿತಿ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ ಅವರು, ಇವಾಗ ನಮ್ಮ ಸೈನ್ಯವು ಫಿಂಗರ್ 3ನಲ್ಲಿ ಬೀಡುಬಿಟ್ಟಿದೆ. ಫಿಂಗರ್ 4 ನಮ್ಮ ಪ್ರದೇಶವಾಗಿದ್ದು, ಈಗ ನಾವು ಫಿಂಗರ್ 4ನಿಂದ ಫಿಂಗರ್ 3ಕ್ಕೆ ಸ್ಥಳಾಂತರಗೊಂಡಿದ್ದೇವೆ. ಪ್ರಧಾನಿ ಮೋದಿ ನಮ್ಮ ಪ್ರದೇಶವನ್ನು ಚೀನಿಯರಿಗೆ ಏಕೆ ಬಿಟ್ಟುಕೊಟ್ಟಿದ್ದಾರೆ(?) ಎಂದು ಪ್ರಶ್ನಿಸಿದ್ದಾರೆ.

ಚೀನಾ ಪ್ರವೇಶಿಸಿದ ಪ್ರಮುಖ ಕಾರ್ಯತಂತ್ರದ ಪ್ರದೇಶವಾದ ಡೆಪ್ಸಾಂಗ್ ಪ್ಲೇನ್ಸ್ ಪ್ರದೇಶದ ಬಗ್ಗೆ ರಕ್ಷಣಾ ಸಚಿವರು ಒಂದು ಮಾತನ್ನೂ ಆಡಲಿಲ್ಲ ಎಂದು ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದು, ನಿಜವಾಗಿಯೂ ಪ್ರಧಾನಿಯು ಭಾರತದ ಭೂಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ. ಈ ಬಗ್ಗೆ ಅವರು ದೇಶಕ್ಕೆ ಉತ್ತರಿಸಬೇಕು ಎಂದು ಸುದ್ದುಗೋಷ್ಠಿಯಲ್ಲಿ ರಾಹುಲ್ ಗಾಂಧಿ ಒತ್ತಾಯಿಸಿದರು.

Next Story

RELATED STORIES