Top

COVID 19 India Updates: ದೇಶಾದ್ಯಂತ ಒಂದೇ ದಿನ 78,524 ಹೊಸ ಕೇಸ್​ ಪತ್ತೆ, 68 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ದೇಶದಾದ್ಯಂತ ಕೋವಿಡ್‌-19 ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 68 ಲಕ್ಷ ಗಡಿ ದಾಟಿದೆ.

COVID 19 India Updates: ದೇಶಾದ್ಯಂತ ಒಂದೇ ದಿನ 78,524  ಹೊಸ ಕೇಸ್​ ಪತ್ತೆ, 68 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ
X

ನವದೆಹಲಿ: ದೇಶದಾದ್ಯಂತ ಕೋವಿಡ್‌-19 ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 68 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 78,524 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 971 ಮಂದಿ ಸಾವನ್ನಪ್ಪಿದ್ದಾರೆ.

68,35,656 ಪ್ರಕರಣಗಳ ಪೈಕಿ 9,02,425 ಸಕ್ರಿಯ ಪ್ರಕರಣಗಳಿದ್ದು, 58,27,705 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯ ತನಕ 1,05,526 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ ಇದುವರೆಗೆ 14.7 ಲಕ್ಷ ಕೇಸ್​ ಪತ್ತೆಯಾಗಿದ್ದು, 38,717 ಮಂದಿ ಸಾವಿಗೀಡಾಗಿದ್ದಾರೆ. ಆಂಧ್ರಪ್ರದೇಶದಲ್ಲಿ 7.29 ಲಕ್ಷ ಜನರಿಗೆ ಸೋಂಕು ತಗುಲಿದ್ದು, ಈವರೆಗೆ 6,052 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 6.30 ಲಕ್ಷ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಆ ಪೈಕಿ 9,917 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 6,68,652 ಪ್ರಕರಣಗಳು ಪತ್ತೆಯಾಗಿವೆ. 1,16,153 ಸಕ್ರಿಯ ಪ್ರಕರಣಗಳಿವೆ. 5,42,906 ಮಂದಿ ಇಲ್ಲಿಯವರೆಗೆ ಗುಣಮುಖರಾದ್ದಾರೆ. 9,574 ಮಂದಿ ಸಾವನ್ನಪ್ಪಿದ್ದಾರೆ.

Next Story

RELATED STORIES