Top

ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರಿಗೆ ಬೆಂಬಲಿಸಬೇಕು - ಸಿದ್ದರಾಮಯ್ಯ

ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ(?)

ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರಿಗೆ ಬೆಂಬಲಿಸಬೇಕು - ಸಿದ್ದರಾಮಯ್ಯ
X

ಬೆಂಗಳೂರು: ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರಿಗೆ ಬೆಂಬಲಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಮನವಿ ಮಾಡಿದ್ದಾರೆ.

ಈ ಸಂಬಂಧ ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಎಂದಿದ್ದಾರೆ.

ಇನ್ನು ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ(?) ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರೈತರ ಹೋರಾಟಕ್ಕೆ ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ.

Next Story

RELATED STORIES