ಆಸೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಮತ್ತೊಂದು ಆಘಾತ
ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿರುವುದರಿಂದ ನಾಲ್ಕನೇ ಟೆಸ್ಟ್ನಿಂದ ಬೂಮ್ರಾ ಅವರು ಹೊರ ಬಿದ್ದಿದ್ದಾರೆ

ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ತಂಡದ ಗಾಯಾಳುಗಳ ಪಟ್ಟಿ ಬೆಳೆಯುತ್ತಲೇ ಇದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ವಿಜೇತರನ್ನು ನಿರ್ಧರಿಸಲು ಇನ್ನೊಂದು ಅಂತಿಮ ಟೆಸ್ಟ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾ ಮತ್ತೊಬ್ಬ ಪ್ರಮುಖ ಆಟಗಾರ ತಂಡದಿಂದ ಹೊರ ಬಿದ್ದಿದ್ದಾರೆ.
ವೇಗಿ ಜಸ್ಪ್ರೀತ್ ಬೂಮ್ರಾ ಜ.15ರಂದು ಬ್ರಿಸ್ಬೇನ್ನ ಗಬ್ಬಾ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಟೆಸ್ಟ್ನಲ್ಲಿ ಆಡುತ್ತಿಲ್ಲ. ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿರುವುದರಿಂದ ನಾಲ್ಕನೇ ಟೆಸ್ಟ್ನಿಂದ ಬೂಮ್ರಾ ಅವರು ಹೊರ ಬಿದ್ದಿದ್ದಾರೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಸೋಮವಾರ (ಜ.12) ಮುಕ್ತಾಯಗೊಂಡ ಮೂರನೇ ಟೆಸ್ಟ್ನಲ್ಲಿ ಜಸ್ಪ್ರೀತ್ ಬೂಮ್ರಾ 3 ವಿಕೆಟ್ ಪಡೆದಿದ್ದರು. ಈ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯೀಗ 1-1ರಿಂದ ಸಮಬಲಗೊಂಡಿದೆ. ಹೀಗಾಗಿ ನಾಲ್ಕನೇ ಟೆಸ್ಟ್ ಕುತೂಹಲ ಮೂಡಿಸಿದೆ.
ಇನ್ನು ಟೀಮ್ ಇಂಡಿಯಾದ ಪ್ರಮುಖ ಆಲ್ ರೌಂಡರ್ಗಳಾದ ಹನುಮ ವಿಹಾರಿ ಮತ್ತು ರವೀಂದ್ರ ಜಡೇಜಾ ಈಗಾಗಲೇ ನಾಲ್ಕನೇ ಟೆಸ್ಟ್ನಿಂದ ಹೊರಗುಳಿದಿದ್ದಾರೆ. ವೇಗಿ ಉಮೇಶ್ ಯಾದವ್ ಕೂಡ ಕಳೆದ ತಿಂಗಳು ಗಾಯಕ್ಕೀಡಾಗಿ ಟೆಸ್ಟ್ ಸರಣಿ ಮಧ್ಯದಲ್ಲೇ ಭಾರತಕ್ಕೆ ವಾಪಸ್ಸಾಗಿದ್ದರು.