ಐಪಿಎಲ್ 2021 ಹರಾಜಿಗೆ ನೋಂದಾಯಿಸಿಕೊಂಡ ಅರ್ಜುನ್ ತೆಂಡೂಲ್ಕರ್
ಅರ್ಜುನ್ ತೆಂಡೂಲ್ಕರ್ ಇತ್ತೀಚೆಗಷ್ಟೇ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಗುರುತಿಸಿಕೊಂಡಿದ್ದರು.

X
Admin 26 Feb 2021 5:40 AM GMT
ಚೆನ್ನೈ: ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) 2021ನೇ ಸಾಲಿನ ಟಿ-20 ಕ್ರಿಕೆಟ್ ಟೂರ್ನಿಗಾಗಿ ಬಹುನಿರೀಕ್ಷಿತ ಹರಾಜು ಪ್ರಕ್ರಿಯೆ ಫೆಬ್ರುವರಿ 18ರಂದು ಚೆನ್ನೈನಲ್ಲಿ ನಡೆಯಲಿದ್ದು, ನೋಂದಣಿ ಮಾಡಿಕೊಂಡಿರುವ ಆಟಗಾರರ ಪಟ್ಟಿ ಬಿಡುಗಡೆ ಆಗಿದೆ.
ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂಬ ಸುದ್ದಿ ವರದಿ ಆಗಿದೆ. ಇದರೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ನಲ್ಲಿ ಅದೃಷ್ಟ ಪರೀಕ್ಷೆ ಎದುರಿಸಲಿದ್ದಾರೆ.
ಐಪಿಎಲ್ 2021ನೇ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಮೂಲ ಬೆಲೆ 20 ಲಕ್ಷ ರೂ. ಆಗಿರಲಿದೆ ಎಂಬುದು ತಿಳಿದು ಬಂದಿದೆ. ಈ ಯುವ ಎಡಗೈ ವೇಗಿಯನ್ನು ಯಾವ ತಂಡವು ಖರೀದಿಸಲಿದೆ ಮತ್ತು ಎಷ್ಟು ಮೊತ್ತಕ್ಕೆ ಹರಾಜಾಗಲಿದ್ದಾರೆ ಎಂಬುದನ್ನು ಕುತೂಹಲದಿಂದ ಕಾಯ್ದು ನೋಡಬೇಕು.
ಅರ್ಜುನ್ ತೆಂಡೂಲ್ಕರ್ ಇತ್ತೀಚೆಗಷ್ಟೇ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಗುರುತಿಸಿಕೊಂಡಿದ್ದರು.
Next Story