2nd Test IND VS AUS : ಆರ್. ಅಶ್ವಿನ್, ಬೂಮ್ರಾ ಮ್ಯಾಜಿಕ್, ಆಸೀಸ್ 195ಕ್ಕೆ ಆಲೌಟ್
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 72.3 ಓವರ್ಗಳಲ್ಲಿ 195 ರನ್ ಗಳಿಸಿ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು

ಮೆಲ್ಬರ್ನ್: ಇಂದು ಆರಂಭವಾಗಿರುವ ಆಸ್ಟ್ರೇಲಿಯಾ ಎದುರಿನ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಭಾರತ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಮೂರು, ವೇಗಿ ಜಸ್ಪ್ರೀತ್ ಬೂಮ್ರಾ ನಾಲ್ಕು ವಿಕೆಟ್ ಹುರುಳಿಸಿ ಆಸೀಸ್ ಬ್ಯಾಟ್ಸ್ಮನ್ಗಳಿಗೆ ನಡುಕ ಹುಟ್ಟಿಸಿದ್ದಾರೆ.
ಭಾರತದ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 72.3 ಓವರ್ಗಳಲ್ಲಿ 195 ರನ್ ಗಳಿಸಿ ತನ್ನ ಎಲ್ಲಾ ವಿಕೆಟ್ಗಳನ್ನು ಕಳೆದುಕೊಂಡಿತು.
ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಜೋ ಬರ್ನ್ಸ್ ಅವರನ್ನು ರನ್ ಖಾತೆ ತೆರೆಯುವ ಮುಂಚೆಯೇ ಬೂಮ್ರಾ ಪೆವಿಲಿಯನ್ ಹಾದಿ ತೊರಿಸಿದರು. ನಂತರ ಬಂದ ಮ್ಯಾಥ್ಯೂ ವೇಡ್(30), ಮಾರ್ನಸ್ ಲಾಬು ಷೇನ್ (48), ಟ್ರಾವಿಸ್ ಹೆಡ್(38), ಟ್ರಾವಿಸ್ ಹೆಡ್(38) ರನ್ ಗಳಿಸಿ ತಂಡಕ್ಕೆ ಆಸರೆಯಾದರು. ವೇಡ್ ಹಾಗೂ ಸ್ಟೀವ್ ಸ್ಮಿತ್ (00) ವಿಕೆಟ್ ಪಡೆಯುವಲ್ಲಿ ಅಶ್ವಿನ್ ಯಶಸ್ವಿಯಾದರು.
ಭಾರತದ ಪರ ಮೊಹಮ್ಮದ್ ಸಿರಾಜ್ 2 ರವೀಂದ್ರ ಜಡೇಜ 1 ವಿಕೆಟ್ ಪಡೆದಿದ್ದಾರೆ.
4 ಪಂದ್ಯಗಳ ಬಾರ್ಡರ್ ಗಾವಸ್ಕರ್ ಸರಣಿಯಲ್ಲಿ ಆತಿಥೇಯರು 1-0 ಮುನ್ನಡೆ ಸಾಧಿಸಿದ್ದಾರೆ. ಭಾರತವು ಈ ಪಂದ್ಯ ಗೆದ್ದು ಸಮಬಲ ಸಾಧಿಸಿದರೆ, ಸರಣಿ ಜಯದ ಆಸೆ ಜೀವಂತವಾಗುಳಿಯುತ್ತದೆಯಲ್ಲದೇ, ನಡೆಯುವ ಮೂರನೇ ಟೆಸ್ಟ್ ರೋಚಕವಾಗುತ್ತದೆ.