Top

ಟೀಂ ಇಂಡಿಯಾಗೆ ಆಘಾತ: ಆಸೀಸ್​ ವಿರುದ್ಧದ ಟೆಸ್ಟ್ ಸರಣಿಯಿಂದ ಕೆ.ಎಲ್​ ರಾಹುಲ್ ಔಟ್​

ಕೆ.ಎಲ್ ರಾಹುಲ್ ಟೆಸ್ಟ್‌ ಸ್ಕ್ವಾಡ್‌ನಲ್ಲಿದ್ದರೂ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯುವಲ್ಲಿ ವಿಫಲರಾಗಿದ್ದರು

ಟೀಂ ಇಂಡಿಯಾಗೆ ಆಘಾತ: ಆಸೀಸ್​ ವಿರುದ್ಧದ ಟೆಸ್ಟ್ ಸರಣಿಯಿಂದ ಕೆ.ಎಲ್​ ರಾಹುಲ್ ಔಟ್​
X

ಸಿಡ್ನಿ: ಆಸೀಸ್​ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಆಟಗಾರರಿಗೆ ಗಾಯದ ಸಮಸ್ಯೆಗಳು ಸಾಕಷ್ಟು ಕಾಡುತ್ತಿದ್ದು, ಸದ್ಯ ಈಗ ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಈ ಸಮಸ್ಯೆ ಎದುರಾಗಿದೆ. ಬಹಳ ದಿನಗಳ ನಂತರ ಟೆಸ್ಟ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡ ರಾಹುಲ್ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆಸಿದ ಅಭ್ಯಾಸದ ವೇಳೆ ಗಾಯಗೊಂಡ ಪರಿಣಾಮ ಮುಂದಿನ ಎರಡು ಟೆಸ್ಟ್​​ ಪಂದ್ಯಗಳಿಂದಲೂ ರಾಹುಲ್ ಹೊರಬಿದ್ದಿದ್ದಾರೆ.

ಸಿಡ್ನಿ ಟೆಸ್ಟ್ ಪಂದ್ಯಕ್ಕೂ ಮುನ್ನ ನೆಟ್​ನಲ್ಲಿ ಅಭ್ಯಾಸವನ್ನು ನಡೆಸುತ್ತಿದ್ದ ವೇಳೆ ಕೆಎಲ್ ರಾಹುಲ್ ಅವರಿಗೆ ಗಾಯವಾಗಿದೆ. ಹೀಗಾಗಿ ಮುಂದಿನ ಎರಡು ಪಂದ್ಯಗಳಿಂದ ಕೆಎಲ್ ರಾಹುಲ್ ಹೊರಬಿದ್ದಿದ್ದಾರೆ. ಶನಿವಾರ ರಾಹುಲ್ ಗಾಯಗೊಂಡಿದ್ದು ಈ ಬಗ್ಗೆ ಬಿಸಿಸಿಐ ಖಚಿತಪಡಿಸಿದೆ.

ಕೆ.ಎಲ್ ರಾಹುಲ್ ಟೆಸ್ಟ್‌ ಸ್ಕ್ವಾಡ್‌ನಲ್ಲಿದ್ದರೂ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆಯುವಲ್ಲಿ ವಿಫಲರಾಗಿದ್ದರು. ಮೊದಲ ಎರಡು ಪಂದ್ಯಗಳಲ್ಲಿ ಕೆಎಲ್ ರಾಹುಲ್ ಸ್ಥಾನವನ್ನು ಪಡೆಯುವ ನಿರೀಕ್ಷೆ ಹೊಂದಿತ್ತಾದರೂ ನಿರಾಸೆ ಅನುಭವಿಸಿದ್ದರು. ಈಗ ಉಳಿದೆರಡು ಪಂದ್ಯಗಳಿಂದಲೂ ಅವರು ಅಲಭ್ಯವಾಗಿದ್ದಾರೆ.

ಮೊದಲ ಟೆಸ್ಟ್‌ ಪಂದ್ಯವನ್ನು ಆಘಾತಕಾರಿ ರೀತಿಯಲ್ಲಿ ಸೋಲು ಕಂಡಿದ್ದ ಟೀಮ್ ಇಂಡಿಯಾ ಮೆಲ್ಬರ್ನ್ ಅಂಗಳದಲ್ಲಿ ನಡೆದ ಎರಡನೇ ಪಂದ್ಯವನ್ನು ಅಜಿಂಕ್ಯ ರಹಾನೆ ನೇತೃತ್ವದಲ್ಲಿ ಜಯಗಳಿಸಿತು. ಸರಣಿಯಲ್ಲಿ ಈಗ ಎರಡು ಪಂದ್ಯ ಬಾಕಿಯಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

Next Story

RELATED STORIES