Top

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಸಿಎಂ ಬಿ.ಎಸ್​​ ಯಡಿಯೂರಪ್ಪ ಪ್ರತಿಕ್ರಿಯೆ

ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಸಿಎಂ ಬಿ.ಎಸ್​​ ಯಡಿಯೂರಪ್ಪ ಪ್ರತಿಕ್ರಿಯೆ
X

ಬೆಂಗಳೂರು: 'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರು ಹೇಳಿದ್ದಾರೆ.

ಇಂದು ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅವರ ಹೇಳಿಕೆಗೆ ಸಿಎಂ ಆಫ್​ ಕರ್ನಾಟಕ ಟ್ವಿಟರ್ ಖಾತೆಯ​ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.

ಸದ್ಯ ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಮುಖ್ಯಮಂತ್ರಿ ಬಿಎಸ್​ವೈ ಅವರು ಪ್ರತಿಕ್ರಿಯೆ ನೀಡಿದ್ದಾರೆ.


Next Story

RELATED STORIES