ಅಹಿತಕರ ಘಟನೆಗಳು ನಡೆದ್ರೆ ಅದರ ಹೊಣೆಯನ್ನು ಮೋದಿ ಸರ್ಕಾರವೇ ವಹಿಸಿಕೊಳ್ಳಬೇಕಾಗುತ್ತದೆ
ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಿಎಂ ಬಿಎಸ್ವೈ ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ.

ಬೆಂಗಳೂರು: ರೈತ ಹೋರಾಟಗಾರರ ಆಕ್ರೋಶ ಸ್ಪೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ರೈತ ಹೋರಾಟಗಾರರ ಆಕ್ರೋಶ ಸ್ಪೋಟಗೊಳ್ಳಲು ಅವಕಾಶ ನೀಡದೆ ಪ್ರಧಾನಿ @narendramodi ಅವರು ತಕ್ಷಣ ರೈತ ವಿರೋಧಿ ಕಾನೂನುಗಳನ್ನು ವಾಪಸು ಪಡೆಯಬೇಕೆಂದು ಆಗ್ರಹಿಸುತ್ತೇನೆ. 1/3#RaitaGanaRajyotsava
— Siddaramaiah (@siddaramaiah) January 26, 2021
ಇಂದು ತಮ್ಮ ಅಧಿಕೃತ ಟ್ವಿಟರ್ ಖಾತೆ ಬರೆದುಕೊಂಡಿರುವ ಅವರು, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್ಗೆ ಸಂಬಂಧಿಸಿದಂತೆ ಅಹಿತಕರ ಘಟನೆಗಳು ನಡೆದರೆ ಅದರ ಹೊಣೆಯನ್ನು ನರೇಂದ್ರ ಮೋದಿ ಅವರ ಸರ್ಕಾರವೇ ವಹಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಟ್ರಾಕ್ಟರ್ ಪರೇಡ್ಗೆ ಸಂಬಂಧಿಸಿದಂತೆ ಅಹಿತಕರ ಘಟನೆಗಳು ನಡೆದರೆ ಅದರ ಹೊಣೆಯನ್ನು @narendramodi ಸರ್ಕಾರವೇ ವಹಿಸಿಕೊಳ್ಳಬೇಕಾಗುತ್ತದೆ. 2/3#RaitaGanaRajyotsava
— Siddaramaiah (@siddaramaiah) January 26, 2021
ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿ ತಿಳಿಸಿದ್ದಾರೆ.
ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಮುಖ್ಯಮಂತ್ರಿ @BSYBJP ಅವರು ತನ್ನ ರೈತ ವಿರೋಧಿ ನಿಲುವಿಗೆ ತಕ್ಕ ಪ್ರತಿಫಲವನ್ನು ಉಣ್ಣಬೇಕಾಗುತ್ತದೆ. 3/3 #RaitaGanaRajyotsava
— Siddaramaiah (@siddaramaiah) January 26, 2021