Top

ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ - ಸಿದ್ದರಾಮಯ್ಯ

ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ.

ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ - ಸಿದ್ದರಾಮಯ್ಯ
X

ಮೈಸೂರು: ಜನರು ರಾಮಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ ಅದು ಬಿಜೆಪಿಗಾಗಿ ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೆಕ್ಕ ಕೇಳುವ ಅಧಿಕಾರ ನನಗೆ ಇದೆ. ನಾನು ಈ ದೇಶದ ಪ್ರಜೆ ನಾನು ದುಡ್ಡು ಕೊಡಲಿ ಬಿಡಲಿ. ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ, ಕೇಳುವುದು ನಮ್ಮ ಹಕ್ಕು. ಲೆಕ್ಕ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಅದರ ಅರ್ಥ ಹಣ ದುರುಪಯೋಗವಾಗುತ್ತಿದೆ. ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ ಇದರ ಅರ್ಥ ಏನು ಅವರೇ ಹೇಳಬೇಕು ಎಂದರು.

ನಾನು ನನ್ನ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ. ಜನರು ಇದಕ್ಕೆ ವಂತಿಗೆ ನೀಡುತ್ತಿದ್ದಾರೆ. ಎಷ್ಟು ವೆಚ್ಚ ಎನ್ನುವುದರ ಬಗ್ಗೆ ಹೇಳಲು ಸಾಧ್ಯವಿಲ್ಲ. ರಾಮ ಜನರ ಧಾರ್ಮಿಕ ನಂಬಿಕೆ. ಎಲ್ಲಾ ಕಡೆ ರಾಮ ಮಂದಿರ ಕಟ್ಟುತ್ತಾರೆ ಅದರಲ್ಲೇನಿದೆ. ದೇವರು ಅನ್ನೋದು ಜನರಿಗೆ ಭಯ ಭಕ್ತಿಯ ಸಂಕೇತ ಇದನ್ನು ಅವರು ರಾಜಕಾರಣಕ್ಕೆ ಬಳಸುತ್ತಾರೆ ಎಂದು ಸಿದ್ದರಾಮಯ್ಯ ಅವರು ರಾಮ ಮಂದಿರ ಕಟ್ಟಿಸುವ ಬಗ್ಗೆ ಹೇಳಿದರು.

ಬಜೆಟ್​ನಲ್ಲಿ ಎಲ್ಲ ಪ್ರಶ್ನೆಗೂ ಉತ್ತರ ಸಿಗಲಿದೆ ಎಂಬ ಸಿಎಂ ಬಿಎಸ್ವೈ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಇವರ ಬಜೆಟ್ ಮೇಲೆ ಯಾವ ನಿರೀಕ್ಷೆಯೂ ಇಲ್ಲ. ಕಾರಣ ಇವರ ಬಳಿ ಹಣವೇ ಇಲ್ಲ. ನಾನು ಕೇಳಿದ ಪ್ರಶ್ನೆಗಳಿಗೆ ಇನ್ನು ಉತ್ತರ ಕೊಟ್ಟಿಲ್ಲ. ಇನ್ನು ಬಜೆಟ್​ನಲ್ಲಿ ಏನು ಉತ್ತರ ಕೊಡುತ್ತಾರೆ. ಪ್ರಶ್ನೆ ಕೇಳಿದೆ ಬರೆದುಕೊಂಡು ಬಂದು ಉತ್ತರ ಕೊಡುತ್ತಾರೆ. ಇವರಿಂದ ಯಾವುದೇ ನಿರೀಕ್ಷೆ ಇಲ್ಲ ಎಂದಿದ್ದಾರೆ.

ಪಾಲಕೆ ಮೇಯರ್ ಉಪಮೇಯರ್ ಚುನಾವಣೆ ವಿಷಯದ ಕುರಿತು ಮಾತನಾಡಿದ ಅವರು, ಜೆಡಿಎಸ್ ತಾನಾಗಿ ಬಂದು ಮೈತ್ರಿ ಮಾಡಿಕೊಂಡರೆ ನನ್ನ ವಿರೋಧ ಇಲ್ಲ. ಹಳೆಯ ಒಪ್ಪಂದದಂತೆ ನಮಗೆ ಮೇಯರ್ ಸ್ಥಾನ ಅವರು ನೀಡಬೇಕು. ಕೊಟ್ಟರೆ ಮೈತ್ರಿ ಮುಂದುವರಿಸಲು ಹೇಳಿದ್ದೇನೆ. ಎಲ್ಲರಿಗೂ ಒಗ್ಗಟ್ಟಾಗಿರಿ ಜಗಳ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೇನೆ ಮತ್ತಷ್ಟು ಕುತೂಹಲಕ್ಕೆ ಕಾರಣವಾದ ಮೇಯರ್ ಚುನಾವಣೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತವರಿನಲ್ಲಿ ಜೆಡಿಎಸ್ ಮೈತ್ರಿಗೆ ಗ್ರೀನ್​ಸಿಗ್ನಲ್ ಕೊಟ್ಟಿದ್ದಾರೆ.

Next Story

RELATED STORIES