ಸಿದ್ದರಾಮಯ್ಯ ಹೇಳಿಕಗೆ ಸಂಸದ ಪ್ರತಾಪ್ ಸಿಂಹ ಟಾಂಗ್
ಸಿದ್ದರಾಮಯ್ಯ ಸಾಬರನ್ನ ಓಲೈಸೋದಕ್ಕೆ ಸುಮ್ಮನೆ ಹೇಳಿಕೆ ಕೊಡ್ತಾರೆ. ಅವರ ಹೇಳಿಕೆಗಳನ್ನ ಗಂಭೀರವಾಗಿ ತೆಗೆದುಕೊಳ್ಳಬೇಡಿ

ಮೈಸೂರು: ರಾಜ್ಯಕ್ಕೆ 2.86 ಲಕ್ಷ ಕೋಟಿ ಸಾಲದ ಹೊರೆ ನೀಡಿದ ಲೆಕ್ಕ ಕೊಡಿ ಆಮೇಲೆ ರಾಮಮಂದಿರಕ್ಕೆ ಕೇಳಿ ಎಂದು ಮೈಸೂರು-ಕೊಡಗು ಸಂಸದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ನಮಗೆ ಲೆಕ್ಕ ಕೇಳುವ ಹಕ್ಕು ಇದೆ ಲೆಕ್ಕ ಕೊಡಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ನೀವು ನಿಮ್ಮೂರಿನಲ್ಲಿ ರಾಮಮಂದಿರ ಕಟ್ಟುವ ಲೆಕ್ಕ ಕೊಡಿ ಅಂದ್ರೆ ಕೊಡೋಲ್ಲ. ಆದರೆ, ಅಯೋಧ್ಯೆ ರಾಮಮಂದಿರಕ್ಕೆ ಲೆಕ್ಕ ಮಾತ್ರ ಕೇಳ್ತಿರಾ(?) ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ನೀವು ಬರುವ ಮುನ್ನ ರಾಜ್ಯದಲ್ಲಿ ಒಂದು ಲಕ್ಷ ಕೋಟಿ ಸಾಲ ಇತ್ತು ಅದನ್ನ 2.86 ಲಕ್ಷ ಕೋಟಿಗೆ ಏರಿಕೆ ಮಾಡಿದ್ದು ಸಿದ್ದರಾಮಯ್ಯ. 1.86 ಲಕ್ಷ ಕೋಟಿ ಎಲ್ಲಿಗೆ ಹೋಯ್ತು(?) ಯಾವುದಕ್ಕೆ ದುರುಪಯೋಗ ಮಾಡಿದರು ಅಂತ ಹೇಳಲಿ ಎಂದಿದ್ದಾರೆ.
ಸಿದ್ದರಾಮಯ್ಯನವರ ಹೆಸರಲ್ಲೆ ರಾಮನಿದ್ದಾನೆ. ಅವರ ಊರಿನಲ್ಲೂ ರಾಮಮಂದಿರ ಕಟ್ಟುತ್ತಿದ್ದಾರೆ. ಹೀಗಾಗಿ ಅವರು ಸಾಬರನ್ನ ಓಲೈಸೋದಕ್ಕೆ ಸುಮ್ಮನೆ ಹೇಳಿಕೆ ಕೊಡ್ತಾರೆ. ಅವರ ಹೇಳಿಕೆಗಳನ್ನ ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದು ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿದ್ದಾರೆ.