ಸವಾಲುಗಳು ಹೊಸದಲ್ಲ, ಅವುಗಳು ಬಂದಾಗ ನನಗೆ ಖುಷಿಯಾಗುತ್ತೆ - ಸಿಎಂ ಬಿಎಸ್ವೈ
ವಿರೋಧ ಪಕ್ಷಗಳ ಟೀಕೆಗಳಿಗೆ ಬಜೆಟ್ ನಂತರವೇ ಉತ್ತರ ಸಿಗಲಿದೆ.

X
Admin 213 Feb 2021 10:52 AM GMT
ಮೈಸೂರು: ಎಲ್ಲವನ್ನು ನಾನು ನಿಭಾಯಿಸುತ್ತೇನೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಎಲ್ಲಾ ಸಮುದಾಯದವರು ಮೀಸಲಾತಿ ಕೇಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನಗೆ ಇಂತಹ ಸವಾಲುಗಳು ಹೊಸದಲ್ಲ. ಸವಾಲುಗಳು ಬಂದಾಗ ನನಗೆ ಖುಷಿಯಾಗುತ್ತೆ, ಮತ್ತಷ್ಟು ಹುಮ್ಮಸ್ಸಿನಿಂದ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಇನ್ನು ಎಲ್ಲರೂ ತಮ್ಮ ತಮ್ಮ ಸಮುದಾಯಕ್ಕೆ ನ್ಯಾಯ ಕೇಳುತ್ತಿದ್ದಾರೆ. ಕೇಳುವುದು ಅವರ ಹಕ್ಕು, ಅದನ್ನು ಪರಿಶೀಲಿಸಿ ಅವರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಸದ್ಯ ವಿರೋಧ ಪಕ್ಷಗಳ ಟೀಕೆಗಳಿಗೆ ಬಜೆಟ್ ನಂತರವೇ ಉತ್ತರ ಸಿಗಲಿದೆ. ಅವರ ಟೀಕೆಗಳಿಗೆ ಈಗ ಉತ್ತರ ನೀಡುವುದಿಲ್ಲ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.
Next Story