Top

ತಮಿಳುನಾಡಿನತ್ತ ಪ್ರಯಾಣ ಬೆಳೆಸಿದ ವಿ.ಕೆ. ಶಶಿಕಲಾ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರು ಜೈಲುವಾಸ ಅನುಭವಿಸಿ ಬಿಡುಗಡೆಯಾಗಿದ್ದಾರೆ.

ತಮಿಳುನಾಡಿನತ್ತ ಪ್ರಯಾಣ ಬೆಳೆಸಿದ ವಿ.ಕೆ. ಶಶಿಕಲಾ
X

ಬೆಂಗಳೂರು: ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ಇಂದು ತಮಿಳುನಾಡಿ ಕಡೆ ಪ್ರಯಾಣ ಬೆಳೆಸಿದ್ದು, ಕೋವಿಡ್​ 19 ಸೋಂಕು ತಗುಲಿದ್ದರಿಂದಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದ ಅವರು ದೇವನಹಳ್ಳಿ ಬಳಿ ಇರುವ ರೆಸಾರ್ಟ್​ವೊಂದರಲ್ಲಿ ವಾಸ್ತವ್ಯ ಹೂಡಿದ್ದರು.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾ ಅವರು ಜೈಲುವಾಸ ಅನುಭವಿಸಿ ಬಿಡುಗಡೆಯಾಗಿದ್ದಾರೆ.

ಸದ್ಯ ತಮಿಳುನಾಡಿಗೆ ಮರಳಿ ತೆರಳುತ್ತಿರುವ ಶಶಿಕಲಾ ಅವರನ್ನು ಸ್ವಾಗತಿಸಲು ನೂರಾರು ಬೆಂಬಲಿಗರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೊಡಗುರ್ಕಿಗೆ ಆಗಮಿಸಿದ್ದಾರೆ. ಈ ನಡುವೆ ತಮಿಳುನಾಡು ಗಡಿಯವರೆಗೂ ಶಶಿಕಲಾ ಅವರ ಸ್ವಾಗತ ಕಾರ್ಯಕ್ರಮಗಳಿಗೆ ಬೆಂಗಳೂರು ಪೊಲೀಸರು ನಿಷೇಧ ಜಾರಿ ಮಾಡಿದ್ದಾರೆ.

ಕೋವಿಡ್ ನಿಯಮ ಪಾಲನೆ ಹಾಗೂ ಕಾನೂನು, ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ಈ ನಿಷೇಧದ ನಿರ್ಧಾರ ಕೈಗೊಳ್ಳಲಾಗಿದೆ.


Next Story

RELATED STORIES