ಸಿಎಂ ಬಿಎಸ್ವೈಗೆ 25 ಸಾವಿರ ರೂ. ದಂಡ
X
Admin 25 Jan 2021 9:46 AM GMT
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಡಿನೋಟಿಫಿಕೇಷನ್ ಆರೋಪ ಹಿನ್ನೆಲೆ ಬಿಎಸ್ವೈ ಸಲ್ಲಿಸಿದ್ದ ರಿಟ್ ಅರ್ಜಿ ರದ್ದುಪಡಿಸಿ, ತನಿಖೆ ಮುಂದುವರೆಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಪಡಿಸಲು ಸಿಎಂ ಬಿಎಸ್ವೈ ಹೈಕೋಟ್ಗೆ ಅರ್ಜಿ ಸಲ್ಲಿಸಿದ್ದರು ಆದರೆ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿ, ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರು ಈ ಆದೇಶ ನೀಡಿ, ಅರ್ಜಿದಾರ ಸಿಎಂ ಬಿಎಸ್ವೈಗೆ 25 ಸಾವಿರ ರೂಪಾಯಿ ದಂಡ ಕೂಡ ವಿಧಿಸಿದ್ದಾರೆ.
ಆರ್.ಟಿ ನಗರದ ಮಠದಹಳ್ಳಿಯಲ್ಲಿ 1.11 ಎಕರೆ ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.
Next Story