Top

ಸಭೆಯಲ್ಲೇ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಬಹಿರಂಗ

ಡಿಸಿ ರೋಹಿಣಿ ಸಿಂಧೂರಿ ಮತ್ತು ಜೆಡಿಎಸ್​ ಶಾಸಕ ಸಾರಾ ಮಹೇಶ್ ಮುಖಾಮುಖಿಯಾಗಿದ್ದು, ಸಭೆಯಲ್ಲೇ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಬಹಿರಂಗ.

X

ಮೈಸೂರು: ಮೊದಲ ಬಾರಿಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಜೆಡಿಎಸ್​ ಶಾಸಕ ಸಾರಾ ಮಹೇಶ್ ಮುಖಾಮುಖಿಯಾಗಿದ್ದು, ಸಭೆಯಲ್ಲೇ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ.

ಮೈಸೂರು ಜಿಲ್ಲಾ ಪಂಚಾಯತ್​ನಲ್ಲಿ ವಿಧಾನಮಂಡಲ ಕಾಗದ ಪತ್ರಗಳ ಸಮಿತಿ ಸಭೆ ನಡೆಯಿತು. ಮಾಜಿ ಸಚಿವ ಸಾರಾ ಮಹೇಶ್ ಅವರು ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷರಾಗಿದ್ದಾರೆ ಈ ಸಭೆಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಭಾಗವಹಿಸಿದ್ದರು.

ಈ ವೇಳೆ ವೇದಿಕೆಯಲ್ಲಿ ಜಿಲ್ಲಾಧಿಕಾರಿಗೆ ಕುಳಿತುಕೊಳ್ಳುವುದಕ್ಕೆ ಆಸನದ ವ್ಯವಸ್ಥೆ ಇರಲಿಲ್ಲ. ಆಸನದ ವ್ಯವಸ್ಥೆ ಇರದ ಕಾರಣ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಜಿಲ್ಲಾಧಿಕಾರಿ ಆಸೀನರಾದರು. ಬಳಿಕ ಸಭೆಯಲ್ಲಿ ಡಿಸಿ ರೋಹಿಣಿ ಸಿಂಧೂರಿ ಮಾಸ್ಕ್ ಹಾಕಿಕೊಂಡು ಮಾತು ಆರಂಭಿಸಿದರು. ಈ ಸಂದರ್ಭದಲ್ಲಿ ಸಾರಾ ಮಹೇಶ್ ಅವರು, ನಿಮ್ಮ ಮಾತು ಕೇಳುತ್ತಿಲ್ಲ. ಮಾಸ್ಕ್ ತೆಗೆದು ಮಾತನಾಡಿ ಎಂದಿದ್ದಾರೆ. ಇದಕ್ಕೆ ಉತ್ತರಿಸಿದ ಡಿಸಿಯವರು, ನಾನು ಮಾಸ್ಕ್ ತೆಗೆಯುವುದಿಲ್ಲ, ಮಾಸ್ಕ್ ತೆಗೆದು ಮಾತನಾಡಬಾರದು. ಅದಕ್ಕಾಗಿ ಮಾಸ್ಕ್ ತೆಗೆಯುವುದಿಲ್ಲ ಎಂದು ಮಾತು ಮುಂದುವರೆಸಿದ ಅವರು, ಈ ಸಭೆಯಲ್ಲಿ ನನಗೆ ಸಂಬಂಧಿಸಿದ ವಿಷಯಗಳ ಚರ್ಚೆ ಇಲ್ಲ. ಹೀಗಾಗಿ ನೀವು ಸಮ್ಮತಿಸಿದರೆ ನಾನು ಸಭೆಯಿಂದ ಹೋಗುತ್ತೇನೆ ಎಂದು ಹೇಳಿದರು.

ಡಿಸಿ ಮಾತಿಗೆ ಉತ್ತರಿಸಿದ ಸಾರಾ ಮಹೇಶ್ ಅವರು, ನಿಮ್ಮನ್ನು ನಾವು ಸಭೆಗೆ ಕರೆದಿರಲಿಲ್ಲ. ಆದರೂ ತಾವು ಸಭೆಗೆ ಬಂದಿದ್ದಿರಿ ಸಂತೋಷ. ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಯಾವುದೇ ಸಭೆಯ ಮಾಹಿತಿ ಕೊಡುವುದು ಕರ್ತವ್ಯ. ಅದಕ್ಕೆ ಮಾಹಿತಿ ಕೊಟ್ಟಿದ್ದೇವೆ ಅಷ್ಟೇ. ಮೈಸೂರಿಗೆ ಬಂದ ಕಾಗದ ಪತ್ರಗಳ ಸಮಿತಿಯನ್ನು ನೀವು ಸ್ವಾಗತಿಸಿಲ್ಲ. ಆದ್ರೂ ಪರವಾಗಿಲ್ಲ. ಸಮಯ ಇದ್ರೆ ಇರಿ, ಬೇರೆ ಕೆಲಸ ಇದ್ರೆ ಹೋಗಿ ಎಂದಿದ್ದಾರಷ್ಟೇ ಹೀಗಾಗಿ ಹೇಳುತ್ತಿದ್ದಂತೆ ರೋಹಿಣಿ ಸಿಂಧೂರಿ ಅವರು ಸಭೆಯಿಂದ ತಕ್ಷಣವೇ ಹೊರನಡೆದು, ಕಾರು ಹತ್ತಿ ಬೇಸರದಿಂದ ತೆರಳಿದ್ದಾರೆ.

Next Story

RELATED STORIES