ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಗೆ 2 ಲಕ್ಷ ಡೋಸ್ ಲಸಿಕೆ - ಭಾರತ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಸಚಿವರು ಈ ಘೋಷಣೆ ಮಾಡಿದ್ದಾರೆ

X
Admin 218 Feb 2021 6:38 AM GMT
ನ್ಯೂಯಾರ್ಕ್: ವಿಶ್ವಸಂಸ್ಥೆಯ ಶಾಂತಿಪಾಲನಾ ತಂಡದ ಸಿಬ್ಬಂದಿಗೆ ಕೋವಿಡ್-19 ಲಸಿಕೆ ನೀಡಲು ಸಿದ್ಧ ಎಂದು ಭಾರತ ಹೇಳಿದ್ದು, ವಿಶ್ವದಾದ್ಯಂತ ಶಾಂತಿಪಾಲನಾ ಪಡೆಯು 12 ಘಟಕಗಳನ್ನು ಹೊಂದಿದೆ. ಸರಿ ಸುಮಾರು 95,000 ಸಿಬ್ಬಂದಿ ಇದ್ದಾರೆ.
ಇಂತಹ ಸಂಕಷ್ಟದ ವೇಳೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವಸಂಸ್ಥೆಯ ಶಾಂತಿಪಾಲಕರನ್ನು ಗಮನದಲ್ಲಿಟ್ಟುಕೊಂಡು 2 ಲಕ್ಷ ಡೋಸ್ ಲಸಿಕೆ ನೀಡುವುದಾಗಿ ಘೋಷಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.
ಕೊರೊನಾ ಸಾಂಕ್ರಾಮಿಕ ಹಾಗೂ ಸಂಘರ್ಷ ವಲಯಗಳಿಗೆ ಸಂಬಂಧಿಸಿದಂತೆ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಸಚಿವರು ಈ ಘೋಷಣೆ ಮಾಡಿದ್ದಾರೆ.
Next Story