ಮಂಗಳೂರು: ಡೆತ್ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ನೆತ್ರಕೆರೆಯಲ್ಲಿ ನಡೆದಿದೆ. ನೆತ್ರಕೆರೆ ಗ್ರಾಮದ ನಿವಾಸಿ ನಿಶ್ಮಿತಾ (22) ಮೃತ ದುರ್ದೈವಿ.
ಕ್ಲಿನಿಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ನಿಶ್ಮಿತಾ ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದು, ಇಂದು ಕೆರೆಯೊಂದರಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.
ಮೃತದೇಹ ಸಿಕ್ಕ ಸ್ಥಳದಲ್ಲಿ ಡೆತ್ನೋಟ್ ಹಾಗೂ ಮೊಬೈಲ್ ಪತ್ತೆಯಾಗಿದ್ದು, ಡೆತ್ನೋಟ್ ನಲ್ಲಿ ನಾಲ್ಕು ಜನರ ಹೆಸರು ಬರೆಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.