ಮಂಡ್ಯ:ಶಾಸಕರ ಮನೆ ಮೇಲೆ ಪುಂಡರು ಕಲ್ಲು ಎಸೆದಿರುವ ಘಟನೆ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.
ಕಿಡಿಗೇಡಿಗಳು ನಿನ್ನೆ ಮಧ್ಯರಾತ್ರಿ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಅವರ ಮನೆ ಮೇಲೆ ಹಾಗೂ ಮೂರು ಕಾರು, ಒಂದು ಖಾಸಗಿ ಬಸ್, ಹೋಂಡಾ ಶೋರೂಂ ಮೇಲೆ ಕಲ್ಲು ಎಸೆದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಶಾಸಕರ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಮೂರು ಕಾರುಗಳು ಬಹುತೇಖ ಜಖಂಗೊಂಡಿದೆ.
ಕಿಡಿಗೇಡಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಪಾಂಡವಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.