ಮಂಡ್ಯ: ಶ್ರೀರಂಗಪಟ್ಟಣ ದಸರಾದಲ್ಲಿ ಪಟಾಕಿ ಶಬ್ದಕ್ಕೆ ಗೋಪಾಲಸ್ವಾಮಿ ಆನೆ ಹೆದರಿದ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ದಸರಾಗೆ ಇಂದು ವಿದ್ಯುಕ್ತ ಚಾಲನೆ ನೀಡಲಾಗಿದ್ದು, ಆದಿ ಚುಂಚನಗಿರಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಟಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ.
ಮರದ ಅಂಬಾರಿಯಲ್ಲಿ ಚಾಮುಂಡೇಶ್ವರಿ ವಿಗ್ರಹ ಹೊತ್ತು ಗೋಪಾಲಸ್ವಾಮಿ ಆನೆ ಮೆರೆವಣಿಗೆಯಲ್ಲಿ ಹೆಜ್ಜೆ ಹಾಕಿದ್ದು, ಈ ವೇಳೆ ಸ್ಥಳೀಯರು ಪಟಾಕಿ ಸಿಡಿಸಿದ್ದಾರೆ. ಪಟಾಕಿ ಶಬ್ದಕ್ಕೆ ಗೋಪಾಲಸ್ವಾಮಿ ಆನೆ ಹೆದರಿದ್ದು, ಅಧಿಕಾರಿಗಳು ಸ್ವಲ್ಪ ಕಾಲ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ.