Tuesday, October 26, 2021

ಒಂದು ಸಾವಿರ ರೂಪಾಯಿಗೆ ಆರಂಭವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ..!

Must read

ಬೆಂಗಳೂರು: ಒಂದು ಸಾವಿರ ರೂಪಾಯಿ ಹಣಕ್ಕಾಗಿ ಪ್ಲಂಬರ್​ವೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ನಗರದ ಕೋಣನಕುಂಟೆಯಲ್ಲಿ ನಡೆದಿದೆ. ಮಂಜುನಾಥ್​ ಮೃತ ದುರ್ದೈವಿ.

ಮೊದಲು ಅನುಮಾನಾಸ್ಪದ ಸಾವು ಎಂದು ದಾಖಲಾಗಿದ್ದ ಪ್ರಕರಣ ಪೊಲೀಸ್​ ತನಿಖೆ ವೇಳೆ ಕೊಲೆ ಎನ್ನುವುದು ಬಹಿರಂಗವಾಗಿದ್ದು, ಮೃತ ಮಂಜುನಾಥ್​ ಸ್ನೇಹಿತ ಆಕಾಶ್​ ಕೊಲೆ ಆರೋಪಿ ಎಂದು ಗುರುತಿಸಲಾಗಿದೆ.

ಮೃತ ಮಂಜುನಾಥ್ ಹಾಗೂ ಆರೋಪಿ ಆಕಾಶ್ ಇಬ್ಬರು ಸ್ನೇಹಿತರಾಗಿದ್ದು, ಪ್ಲಂಬರ್​​ ಕೆಲಸ ಮಾಡಿಕೊಂಡಿಕೊಂಡಿದ್ದರು. ಇತ್ತೀಚೆಗೆ ಕೆಲಸದ ಸಂಬಳ ಬಂದಿದ್ದು, ಹೆಚ್ಚುವರಿ ಆಗಿ ಬಂದ ₹1000ಕ್ಕಾಗಿ ಇಬ್ಬರ ಮಧ್ಯೆ ಗಲಾಟೆ ಆರಂಭವಾಗಿದೆ. ಈ ವೇಳೆ ಆರೋಪಿ ಆಕಾಶ್​ ಮಂಜುನಾಥ್ ಮೇಲೆ ತೀವ್ರ ಹಲ್ಲೆ ನಡೆಸಿದ್ದಾನೆ.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಜುನಾಥ್ ಮೃತಪಟ್ಟಿದ್ದು, ಬಳಿಕ ಈ ಬಗ್ಗೆ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮಧ್ಯೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದು, ಆತನಿಗೆ ಆಕ್ಸಿಡೆಂಟ್ ಸಂಬಂಧ ಗಾಯಗಳಾಗಿಲ್ಲ. ಹಲ್ಲೆಯಿಂದಾದ ಗಾಯಗಳು ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಕೋಣನಕುಂಟೆ ಪೊಲೀಸರು ತನಿಖೆ ನಡೆಸಿದ್ದು, ಮೃತ ಮಂಜುನಾಥ್ ಹಾಗೂ ಆರೋಪಿ ಆಕಾಶ್‌ ನಡುವೆ ಗಲಾಟೆಯಾಗಿರುವುದು ತಿಳಿದು ಬಂದಿದೆ. ಬಳಿಕ ವಿಚಾರಣೆಗೊಳಪಡಿಸಿದಾಗ ಆಕಾಶ್ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಕೂಡ ಭಾಗಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

More articles

Latest article