Tuesday, May 17, 2022

ಸಚಿವ ಶ್ರೀರಾಮುಲು ವಿರುದ್ಧ 27.25 ಎಕರೆ ಭೂ ಕಬಳಿಕೆ ಆರೋಪ

Must read

ಹುಬ್ಬಳ್ಳಿ: ಸಾರಿಗೆ ಸಚಿವ ಶ್ರೀರಾಮುಲು ವಿರುದ್ಧ ಸಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಶ್ರೀರಾಮುಲು ಖೋಟ್ಟಿ ದಾಖಲೆ ಸೃಷ್ಟಿಸಿ 27.25 ಎಕರೆ ಬೆಲೆ ಬಾಳುವ ಭೂಮಿಯನ್ನು ಕಬಳಿಸಿದ್ದಾರೆ. ಸರ್ಕಾರಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ವಿವಾದಿತ ಭೂಮಿಯನ್ನು ನೊಂದಣಿ ಮಾಡಿಸಿಕೊಂಡಿದ್ದಾರೆ ಎಂದು ಎಸ್.ಆರ್ ಹಿರೇಮಠ ಆರೋಪ ಮಾಡಿದ್ದಾರೆ.

ಅಲ್ಲದೇ ಸಚಿವ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಎಸ್.ಆರ್ ಹಿರೇಮಠ ಶ್ರೀರಾಮುಲು ಭೂ ಕಬಳಿಕೆ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿದ್ದಾರೆ.

Latest article