Tuesday, May 17, 2022

ಇಂದಿನಿಂದ ಕಾಂಗ್ರೆಸ್ ಚಿಂತನ ಮಂಥನ ಶಿಬಿರ: ಉದಯಪುರದಲ್ಲಿ ರಾಜ್ಯ ನಾಯಕರ ವಾಸ್ತವ

Must read

ಬೆಂಗಳೂರು: ಇಂದಿನಿಂದ ರಾಜಸ್ತಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತನ ಮಂಥನ ಕಾರ್ಯಾಗಾರ ಆರಂಭವಾಗಲಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ನೇತೃತ್ವದಲ್ಲಿ ನಡೆಯಲಿರುವ ಕಾಂಗ್ರೆಸ್ ಚಿಂತನ ಮಂಥನ ಶಿಬಿರದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.

ಇಂದಿನಿಂದ ಮೂರು ದಿನ ನಡೆಯುವ ಸಭೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಒತ್ತು ನೀಡುವ ನಿಟ್ಟಿನಲ್ಲಿ ನಾಯಕರಲ್ಲಿ‌ ವಿಶ್ವಾಸ ತುಂಬುವ ಪ್ರಯತ್ನ ಹಾಗೂ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಪ್ರಯತ್ನದ ಬಗ್ಗೆ ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಲಿದ್ದಾರೆ.

ಎಲ್ಲಾ ರಾಜ್ಯಗಳ ಹಿರಿಯರು ಭಾಗಿಯಾಗಲಿದ್ದು, ಈಗಾಗಲೇ ಉದಯಪುರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​,  ವೀರಪ್ಪ ಮೊಯ್ಲಿ, ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ,  ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಪರಮೇಶ್ವರ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ದೃವನಾರಾಯಣ್, ಡಿ.ಕೆ.ಸುರೇಶ್ ಸಲೀಂ ಅಹ್ಮದ್ ಸೇರಿದಂತೆ ಹಲವು ನಾಯಕರು ವಾಸ್ತವ ಹೂಡಿದ್ದಾರೆ.

Latest article