ಸೂಕ್ತ ವ್ಯವಸ್ಥೆಯಿಲ್ಲದೆ ವೃದ್ಧೆ ಸಾವು- ನ್ಯಾಯ ದೊರಕಿಸಲು TV5 ಪಣ..!
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರಕದೇ ಹಾಲಮ್ಮ(65) ಎನ್ನುವವರು ಸಾವನ್ನಪ್ಪಿದ್ದ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರು ಮತ್ತು ನರ್ಸ್ ಇರಲಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಜೋಗಿಹಳ್ಳಿ ಪಿಹೆಚ್ಸಿ ಮುಂದೆ ತಡರಾತ್ರಿ ಪ್ರತಿಭಟನೆ ನಡೆಸಿದ್ದು ನಿನ್ನೆ ಸಂಜೆ ಜೋಳ ಮುರಿಯುತ್ತಿದ್ದ ವೇಳೆ ಹಾಲಮ್ಮ(65) ಎಂಬುವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ತಕ್ಷಣವೇ ಅವರನ್ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದ ಕುಟುಂಬಸ್ಥರು ಬಹಳ ಸಮಯ ಕಾದರೂ ವೈದ್ಯರು ಮತ್ತು ನರ್ಸ್ ಗಳು ಬರಲಿಲ್ಲ ಎನ್ನಲಾಗಿದೆ.
ಆಸ್ಪತ್ರೆ ಮುಂಭಾಗ ಬಿಗುವಿನ ವಾತವರಣ ನಿರ್ಮಾಣವಾಗಿದ್ದು ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಕುರಿತು ತಾಲೂಕು ಆರೋಗ್ಯಾಧಿಕಾರಿಯೊಂದಿಗೆ ಮಾತನಾಡಿದ TV5 ಗೆ ಈ ಕೂಡಲೇ ವೈದ್ಯರ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದು ಶಿಸ್ತು ಸಮಿತೆ ರಚನೆ ಮಾಡಿ ಮತ್ತೆ ಈ ರೀತಿಯ ಘಟನೆ ಜರುಗುವುದಿಲ್ಲ ಎಂದು ತಿಳಿಸಿದ್ದಾರೆ.